25.7 C
Bangalore
Sunday, December 15, 2019

ಮಾರುಕಟ್ಟೆ ಸಂಕೀರ್ಣಕ್ಕೆ ಚಾಲನೆ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಭರತ್ ಶೆಟ್ಟಿಗಾರ್ ಮಂಗಳೂರು
ನಗರದ ಅತ್ಯಂತ ಹಳೇ ಮಾರುಕಟ್ಟೆಗಳಲ್ಲಿ ಒಂದಾಗಿರುವ ಕದ್ರಿ ಮಾರುಕಟ್ಟೆಯನ್ನು ಕೆಡವಿ ಸುಸಜ್ಜಿತ ಮಾರುಕಟ್ಟೆ ಸಂಕೀರ್ಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ತಯಾರಿಗಳು ಆರಂಭವಾಗಿವೆ. ಮೊದಲ ಹಂತವಾಗಿ ಮಾರುಕಟ್ಟೆಯಲ್ಲಿದ್ದ ವರ್ತಕರನ್ನು ಸ್ಥಳಾಂತರಿಸಲಾಗಿದೆ. ಪ್ರಸ್ತುತ ಹಳೇ ಕಟ್ಟಡವನ್ನು ಒಡೆದು ಮಾರುಕಟ್ಟೆ ನಿರ್ಮಾಣದ ಆರಂಭಿಕ ಕೆಲಸಗಳಿಗೆ ಚಾಲನೆ ಸಿಕ್ಕಿದೆ ಕಳೆದೊಂದು ವಾರದಿಂದ ಕೆಲಸಗಳು ನಡೆಯುತ್ತಿವೆ.
ಕದ್ರಿಯಲ್ಲಿದ್ದ ಸುಮಾರು 40 ವರ್ಷಗಳಷ್ಟು ಹಿಂದಿನ ಮಾರುಕಟ್ಟೆಯನ್ನು ಕೆಡವಿ 14.71 ಕೋಟಿ ರೂ. ವೆಚ್ಚದಲ್ಲಿ ಮೂರು ಅಂತಸ್ತಿನ ಸುಜಜ್ಜಿತ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ. ಜಮೀನು ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಮಳೆ ಕಡಿಮೆಯಾಗಿರುವುದರಿಂದ ಏಪ್ರಿಲ್-ಮೇ ತಿಂಗಳ ವೇಳೆ ಕಟ್ಟಡ ಮೇಲಕ್ಕೇಳುವ ಸಾಧ್ಯತೆಯಿದೆ.

70ಸೆಂಟ್ಸ್ ಜಾಗದಲ್ಲಿ ನಿರ್ಮಾಣ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಆಗಿನ ಶಾಸಕ ಜೆ.ಆರ್.ಲೋಬೋ ಮಾರುಕಟ್ಟೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಆದರೆ ಕಾಮಗಾರಿ ಮಾತ್ರ ನಡೆದಿರಲಿಲ್ಲ. ಹಿಂದಿನ ಮಾರುಕಟ್ಟೆಯ 25 ಸೆಂಟ್ಸ್ ಹಾಗೂ ಅದರ ಪಕ್ಕದಲ್ಲಿರುವ ಪಾಲಿಕೆಯ 45 ಸೆಂಟ್ಸ್ ಜಾಗ ಸೇರಿ ಒಟ್ಟು 70 ಸೆಂಟ್ಸ್ ಜಾಗದಲ್ಲಿ ಮಾರುಕಟ್ಟೆ ಸಂಕೀರ್ಣ ನಿರ್ಮಾಣವಾಗಲಿದೆ.
 
ಮೂರು ಅಂತಸ್ತಿತ ಮಾರುಕಟ್ಟೆ: ನೂತನ ಕದ್ರಿ ಮಾರುಕಟ್ಟೆ ಸಂಕೀರ್ಣ ಒಟ್ಟು ಮೂರು ಅಂತಸ್ತಿನ ಕಟ್ಟಡವಾಗಿದ್ದು, 6920 ಚ.ಮೀ.ವಿಸ್ತೀರ್ಣ ಹೊಂದಲಿದೆ. ಕೆಳಮಟ್ಟದ ತಳ ಅಂತಸ್ತು (1090 ಚ.ಮೀ) ಮತ್ತು ಮೇಲ್ಮಟ್ಟದ ತಳ ಅಂತಸ್ತು (924.29 ಚ.ಮೀ.) ಎಂದು ಎರಡು ಹಂತದಲ್ಲಿ ವಾಹನ ನಿಲುಗಡೆಗೆ ಅವಕಾಶವಿದೆ. 957.17 ಚ.ಮೀ. ಕೆಳಮಟ್ಟದ ನೆಲ ಅಂತಸ್ತಿನಲ್ಲಿ ಮಾಂಸ, ಮೀನು, ಕೋಳಿ ಅಂಗಡಿಗಳು, 989.54 ಚ.ಮೀ. ಮೇಲ್ಮಟ್ಟದ ನೆಲ ಅಂತಸ್ತಿನಲ್ಲಿ ತರಕಾರಿ ಅಂಗಡಿಗಳು ಇರಲಿವೆ. ಮೊದಲನೇ ಅಂತಸ್ತು (985.97 ಚ.ಮೀ) ಮತ್ತು ಎರಡನೇ ಅಂತಸ್ತು (986 ಚ.ಮೀ) ಮತ್ತು ಮೂರನೇ ಅಂತಸ್ತು (987.23 ಚ.ಮೀ.)ನಲ್ಲಿ ಕಚೇರಿಗಳಿಗೆ ಅವಕಾಶವಿದೆ.
 
ತಾತ್ಕಾಲಿಕ ಮಾರುಕಟ್ಟೆಯಲ್ಲಿ ವ್ಯಾಪಾರ: ಕಾಮಗಾರಿ ಹಿನ್ನೆಲೆಯಲ್ಲಿ ಕೆಡವಲಾದ ಮಾರುಕಟ್ಟೆಯಲ್ಲಿದ್ದ ವ್ಯಾಪಾರಿಗಗಳಿಗೆ ಮಲ್ಲಿಕಟ್ಟೆ ಮುಖ್ಯರಸ್ತೆಯ ಬದಿಯಲ್ಲಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸಲಾಗುದ್ದು, ವ್ಯಾಪಾರ ನಡೆಸುತ್ತಿದ್ದಾರೆ. ರಸ್ತೆಗೆ ಹೊಂದಿಕೊಂಡಂತೆ ಮಾರುಕಟ್ಟೆ ನಿರ್ಮಿಸಿರುವುದರಿಂದ ವಾಹನ ದಟ್ಟಣೆ ಉಂಟಾಗುತ್ತಿದೆ. ಬೆಳಗ್ಗೆ, ಸಾಯಂಕಾಲ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯ ಗ್ರಾಹಕರು ಬರುವುದರಿಂದ, ವಾಹನಗಳನ್ನು ನಿಲ್ಲಿಸಲು ಜಾಗವಿಲ್ಲದೆ ರಸ್ತೆ ಬದಿಯಲ್ಲೇ ಇರಿಸಿ ಖರೀದಿಸಲು ತೆರಳುತ್ತಾರೆ. ಇದರಿಂದ ವಾಹನ ದಟ್ಟಣೆ ಸಾಮಾನ್ಯವಾಗಿದೆ. ಶೀಘ್ರ ಮಾರುಕಟ್ಟೆ ನಿರ್ಮಿಸಿ ವ್ಯಾಪಾರಕ್ಕೆ ಬಿಟ್ಟು ಕೊಡಬೇಕು ಎಂದು ವರ್ತಕರು ಆಗ್ರಹಿಸಿದ್ದಾರೆ.
 
ಕದ್ರಿಯಲ್ಲಿ ಮಾರುಕಟ್ಟೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಶೀಘ್ರ ಕಾಮಗಾಗಿ ಪೂರ್ಣಗೊಳಿಸಿ, ಸುಸಜ್ಜಿತ ಮಾರುಕಟ್ಟೆ ಲೋಕಾರ್ಪಣೆಗೊಳಿಸಲಾಗುವುದು.
ವೇದವ್ಯಾಸ ಕಾಮತ್ ಶಾಸಕ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...