ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯ : ಅಶೋಕ್ ರೈ ಕರೆ

New Project (15)
Published on

ಪುತ್ತೂರು ಗ್ರಾಮಾಂತರ: ನಾವು ಪಕ್ಷಾತೀತವಾಗಿ ಕೆಲಸ ಮಾಡಬೇಕು. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಮಾತ್ರಕ್ಕೆ ಜನರು ಓಟು ನೀಡುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ನಮ್ಮ ಪಕ್ಷದ ಓಟನ್ನು ವೃದ್ಧಿಸಿಕೊಳ್ಳಬೇಕಾದರೆ ನಾವು ಬಿಜೆಪಿಯವರಿಗೂ ಸಹಾಯ ಮಾಡಬೇಕು. ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡುತ್ತೇನೆ. ತಳಮಟ್ಟದ ಜನತೆಯ ಕಷ್ಟ-ತೊಂದರೆಗಳಿಗೆ ಸ್ಪಂದನೆ ನೀಡುವ ಮೂಲಕ ಜನರ ಮನಸ್ಸು ಗೆಲ್ಲುವ ಕೆಲಸವನ್ನು ನೀವು ಮಾಡಬೇಕು ಎಂದು ಶಾಸಕ ಅಶೋಕ್‌ಕುಮಾರ್ ರೈ ಕಾರ್ಯಕರ್ತರಿಗೆ ಕರೆ ನೀಡಿದರು.

2 ಕೋಟಿ ರೂ.ವೆಚ್ಚದ ಕೆದಂಬಾಡಿ ಗ್ರಾಮದ ಸಾರೆಪುಣಿ-ಕೋರಿಕ್ಕಾರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಶಿಲಾನ್ಯಾಸಗೈದು ಮಾತನಾಡಿದರು.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕೆದಂಬಾಡಿ ಕಾಂಗ್ರೆಸ್ ವಲಯಾಧ್ಯಕ್ಷ ಪುರಂದರ ರೈ ಕೋರಿಕ್ಕಾರು, ಪ್ರಧಾನ ಕಾರ್ಯದರ್ಶಿ ಸುಮಯ್ಯ ಗಾಂಧಿ ನಗರ, ಕೆಯ್ಯೂರು ದುರ್ಗಾಪರಮೇಶ್ವರಿ-ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ.ಜಯರಾಮ ರೈ, ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಪೂಜಾರಿ ಬೊಳ್ಳಾಡಿ, ಪಕ್ಷದ ಮುಖಂಡ ಬಶೀರ್ ಬಶೀರ್ ಕೌಡಿಚ್ಚಾರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net