ಸಂಸ್ಥಾಪಕರ ಆಶಯ ಈಡೇರಿಸಬೇಕು

blank

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ರಗತಿ ಶಿಕ್ಷಣ ಸಂಸ್ಥೆಯನ್ನು ಮೂರು ದಶಕಗಳ ಹಿಂದೆ ಸ್ಥಾಪಿಸಿದ ಪಿ.ಮಾಳಿಗೆಪ್ಪ ಹಾಗೂ ಪಿ.ಚನ್ನರಸಪ್ಪ ಸಹೋದರರ ಆಶಯಗಳನ್ನು ಸಂಸ್ಥೆಯಲ್ಲಿನ ಆಡಳಿತ ವರ್ಗ ಈಡೇರಿಸುವತ್ತ ಕೆಲಸ ಮಾಡಬೇಕು ಎಂದು ಪ್ರಗತಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಸತೀಶ್ ಕುಮಾರ್ ತಿಳಿಸಿದರು.
ಗಿರಿಜಾ ಶಂಕರ ಕಲ್ಯಾಣ ಮಂಟಪದಲ್ಲಿ ನಗರೇಶ್ವರ ಎಜುಕೇಶನ್ ಟ್ರಸ್ಟ್‌ನ ಪ್ರಗತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ಜನ್ಮದಿನೋತ್ಸವದ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಸಂಸ್ಥಾಪಕರ ದಿನಾಚರಣೆ ಮಾತನಾಡಿದರು. ಶಿಕ್ಷಣ ಸಂಸ್ಥೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಉತ್ತಮ ಜೀವನಕ್ಕೆ ಬುನಾದಿ ಹಾಕುತ್ತಿದೆ ಎಂದರು.
ದೇವನಹಳ್ಳಿ ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮ.ಸುರೇಶ್ ಬಾಬು ಮಾತನಾಡಿ, 30 ವರ್ಷದ ಹಿಂದೆ ಪಟ್ಟಣದಲ್ಲಿ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಗಗನ ಕುಸುಮವಾಗಿತ್ತು, ಆ ಕಾಲದಲ್ಲಿ ಹೆಣ್ಣು ಮಕ್ಕಳು ಉನ್ನತ ಶಿಕ್ಷಣದಿಂದ ಹೊರಗುಳಿಯಬಾರದೆಂಬ ಸಾಮಾಜಿಕ ಕಳಕಳಿಯಿಂದ ಪಿ.ಮಾಳಿಗೆಪ್ಪ ಪ್ರಥಮವಾಗಿ ಪಟ್ಟಣದಲ್ಲಿ ಕೇವಲ ಹೆಣ್ಣು ಮಕ್ಕಳಿಗೆ ಪ್ರೌಢಶಾಲೆ ಪ್ರಾರಂಭಿಸಿದರು ಎಂದರು.
ಸಂಸ್ಥೆ ಬೆಳೆದಿದೆ:
30 ವಿದ್ಯಾರ್ಥಿಗಳಿಂದ ಪ್ರಾರಂಭವಾದ ಸಂಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದ್ದು ಪ್ರಗತಿ ಆಂಗ್ಲ ಪ್ರಾಥಮಿಕ ಪಾಠಶಾಲೆ, ಪ್ರೌಢಶಾಲೆ, ಬಾಲಕಿಯರ ಪದವಿಪೂರ್ವ ಕಾಲೇಜು, ಸಂಯುಕ್ತ ಪದವಿಪೂರ್ವ ಕಾಲೇಜು, ಕೈಗಾರಿಕಾ ತರಬೇತಿ ಸಂಸ್ಥೆ, ಹಾಗೂ ಪ್ರಥಮ ದರ್ಜೆ ಕಾಲೇಜು ಆಗಿ ಬೆಳೆದಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೃಪಾಶಂಕರ್ ಹೇಳಿದರು.
ಶಾಲಾ ಕಾಲೇಜು ಶಿಕ್ಷಕರಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಬಾರಿಯ ಫೌಂಡರ್ಸ್ ಕಪ್‌ನ್ನು ಪ್ರಗತಿ ಪ್ರೌಢಶಾಲಾ ತಂಡಕ್ಕೆ ಹಸ್ತಾಂತರಿಸಲಾಯಿತು. ಸಂಸ್ಥೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಶಿಕ್ಷಕ ಸಿ ಬಿ ಹರೀಶ್, ಸಹಾಯಕರಾದ ಹಸೀನಾ ಹಾಗೂ ಪುಟ್ಟಮ್ಮ ಅವರನ್ನು ಸನ್ಮಾನಿಸಲಾಯಿತು.

Share This Article

ಉಪ್ಪಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಈ ವರ್ಷ ಗೂಗಲ್​ನಲ್ಲಿ ಅತಿ ಹೆಚ್ಚು ಹುಡುಕಿದ ಪಾಕವಿಧಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ ಉಪ್ಪಿನಕಾಯಿ ಭಾರತದಲ್ಲಿ…

ಟಾಯ್ಲೆಟ್​​ನ ಕೊಳಕು ವಾಸನೆ, ಹಳದಿ ಕಲೆ ತೆಗೆದುಹಾಕುವುದೇಗೆ?; ಇಲ್ಲಿದೆ ಸಿಂಪಲ್​ ವಿಧಾನ | Tips

ಮನೆಯನ್ನು ಸ್ವಚ್ಛಗೊಳಿಸಲು ಮತ್ತು ಅಲಂಕರಿಸಲು ಜನರು ಶ್ರಮಿಸುತ್ತಾರೆ. ಹೊರಗಿನಿಂದ ಅವರ ಮನೆಯು ಸಾಕಷ್ಟು ಐಷಾರಾಮಿಯಾಗಿ ಕಾಣುತ್ತದೆ.…

ಚಳಿಗಾಲದಲ್ಲಿ ಬಿಸಿ ಚಹಾ ಮತ್ತು ಕಾಫಿ ಸೇವಿಸುತ್ತಿದ್ದೀರಾ; ಅಪಾಯ ತಪ್ಪಿದಲ್ಲ.. ಎಚ್ಚರದಿಂದಿರಿ | Health Tips

ಚಳಿಗಾಲ ಬಂದ ಕೂಡಲೆ ಟೀ, ಕಾಫಿ ಸೇವನೆ ಹೆಚ್ಚುತ್ತದೆ. ಈ ಬಿಸಿ ಪಾನೀಯವು ದೇಹಕ್ಕೆ ಶಾಖವನ್ನು…