More

    ಇಂಡಿಯನ್ ಅಕಾಡೆಮಿ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆ

    ಬೆಂಗಳೂರು: ಪ್ರತಿಯೊಬ್ಬರೂ ವೃತ್ತಿಪರತೆ ಅಳವಡಿಸಿಕೊಳ್ಳುವುದರಿಂದ ಉತ್ತಮ ಜೀವನ ಶೈಲಿ ಹೊಂದಲು ಸಾಧ್ಯವಾಗುತ್ತದೆ. ಎಲ್ಲರೂ ಸೌಹಾರ್ದತೆ, ಮಾನವೀಯತೆ, ಕರ್ತವ್ಯ ಪ್ರಜ್ಞೆಯನ್ನು ಅಳವಡಿಸಿಕೊಂಡಾಗ ಸಹಜವಾಗಿಯೇ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಪ್ರೊ. ಡಾ. ಬಿ.ಎಸ್. ಶ್ರೀನಾಥ್ ಹೇಳಿದ್ದಾರೆ.

    ನಗರದ ಇಂಡಿಯನ್ ಅಕಾಡೆಮಿ ಸಮೂಹ ವಿದ್ಯಾಸಂಸ್ಥೆಯ ಆವರಣದಲ್ಲಿ ಬುಧವಾರ ಜರುಗಿದ ಸಂಸ್ಥಾಪಕರ ದಿನಾಚರಣೆಯಲ್ಲಿ ಮಾತನಾಡಿದರು.

    ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಕ್ಯಾಪ್ಟನ್ ನವೀನ್ ನಾಗಪ್ಪ ಮಾತನಾಡಿ, ಅಂಕ ಗಳಿಕೆಯೇ ವಿದ್ಯಾರ್ಥಿಗಳ ಗುರಿ ಆಗಬಾರದು. ಭವಿಷ್ಯ ರೂಪಿಸುವುದರಲ್ಲಿ ಸೃಜನಶೀಲತೆ, ಕೌಶಲ್ಯ, ಆಸಕ್ತಿಕರ ಹವ್ಯಾಸಗಳ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕಿವಿಮಾತು ಹೇಳಿದರು.

    ಪ್ರತಿಯೊಬ್ಬರ ಬದುಕಿಗೂ ನಿರ್ದಿಷ್ಟ ಗುರಿ ಇದ್ದೂ, ಅದನ್ನು ತಲುಪಲು ಪ್ರಯತ್ನಿಸುತ್ತಲೇ ಇರಬೇಕು. ಸಾಧಿಸುವುದು ಇನ್ನಷ್ಟಿದೆ ಎಂಬ ಮಾತನ್ನು ನೆನಪಿನಲ್ಲಿಟ್ಟುಕೊಂಡರೆ ಸಮಾಜಕ್ಕೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಇಂಡಿಯನ್ ಅಕಾಡೆಮಿ ಸಮೂಹ ವಿದ್ಯಾಸಂಸ್ಥೆ ಸಂಸ್ಥಾಪಕ ಡಾ. ಟಿ. ಸೋಮಶೇಖರ್ ಹೇಳಿದರು.

    ಸಂಸ್ಥೆಯ ಪ್ರಾಂಶುಪಾಲ ಡಾ. ತಿಲಗಾ, ಶೈಕ್ಷಣಿಕ ನಿರ್ದೇಶಕ ಪ್ರೊ. ಸೂರ್ಯ ನಾರಾಯಣ, ಸ್ಕೂಲ್ ಆಫ್ ಮ್ಯಾನೇಜ್ ಮೆಂಟ್ ನಿರ್ದೇಶಕಿ ಡಾ. ರೀನಾ ಶ್ಯಾಂ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts