More

    ನಿವೃತ್ತ ಪೊಲೀಸ್ ಅಧಿಕಾರಿ ಮನೆಯಲ್ಲಿ ಕಳವು ಮಾಡಿದ್ದ ನಾಲ್ವರ ಸೆರೆ


    ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಮಣಿಕಂಠ(೨೨), ದೀಕ್ಷಿತ್(೨೧), ಅಜಯ್(೨೨) ಮತ್ತು ಕೀರ್ತಿ(೨೬) ಬಂಧಿತರು.
    ಆರೋಪಿಗಳು ಮಾ.೫ ರಂದು ನಿವೃತ್ತ ಪೊಲೀಸ್ ಅಧಿಕಾರಿ ನಾಗರಾಜ್ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದರು. ಈ ಬಗ್ಗೆ ದಾಖಲಾದ ದೂರಿನನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಾ.೨೭ ರಂದು ಲಗ್ಗೆರೆ ಮುಖ್ಯರಸ್ತೆಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ದೀಕ್ಷಿತ್ ಮತ್ತು ಅಜಯ್‌ನನ್ನು ಗಸ್ತಿನಲ್ಲಿದ್ದ ರಾಜಗೋಪಾಲನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿ, ಪರಿಶೀಲಿಸಿದಾಗ ಒಬ್ಬನ ಪ್ಯಾಂಟ್ ಜೇಬಿನಲ್ಲಿ ಒಂದು ಜತೆ ಬೆಳ್ಳಿಯ ಕಾಲುಚೈನು ಹಾಗೂ ಮತ್ತೊಬ್ಬನ ಜೇಬಿನಲ್ಲಿ ಬೆಳ್ಳಿಯ ಉಡುದಾರ ಪತ್ತೆಯಾಗಿದೆ. ಇವುಗಳ ಬಗ್ಗೆ ಸರಿಯಾದ ಉತ್ತರ ನೀಡದೆ ತಡವರೆಸಿದ್ದರಿಂದ ಇಬ್ಬರನ್ನು ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿರುವ ಬಗ್ಗೆ ಹಾಗೂ ಮತ್ತಿಬ್ಬರ ಆರೋಪಿಗಳ ಬಗ್ಗೆ ಬಾಯಿಬಿಟ್ಟಿದ್ದಾರೆ.

    ನಗದು-ಚಿನ್ನಾಭರಣ ಜಪ್ತಿ:
    ಈ ಹಿನ್ನೆಲೆಯಲ್ಲಿ ಆರೋಪಿಗಳಾದ ಮಣಿಕಂಠ ಮತ್ತು ಒಡವೆಗಳನ್ನು ಸ್ವೀಕರಿಸಿದ ಕೀರ್ತಿಯನ್ನು ಬಂಧಿಸಿ ಆರೋಪಿಗಳಿಂದ ೫೦ ಸಾವಿರ ನಗದು ಸೇರಿ ಒಟ್ಟು ೨೮.೫ ಲಕ್ಷ ರೂ. ಮೌಲ್ಯದ ಚಿನ್ನಾಭರಣ, ೫೦೦ ಗ್ರಾಂ ಬೆಳ್ಳಿ ಒಡವೆಗಳು ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮಣಿಕಂಠ ರಾಜಗೋಪಾಲನಗರ ಠಾಣಾ ಪೊಲೀಸರು ರೌಡಿಶೀಟರ್ ಆಗಿದ್ದರೆ, ಅಜಯ್ ತುಮಕೂರಿನ ರೌಡಿಶೀಟರ್ ಆಗಿದ್ದಾನೆ. ಆರೋಪಿಗಳನ್ನು ೮ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾಗ ಉತ್ತರಹಳ್ಳಿ ಬಿಎಚ್‌ಸಿಎಸ್ ಲೇಔಟ್‌ನ ಮನೆಯೊಂದರಲ್ಲಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಮನೆ ಕಳ್ಳತನವಾಗಿರುವ ಬಗ್ಗೆ ಪೊಲೀಸ್ ಅಧಿಕಾರಿ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ದೂರುನೀಡಿದ್ದರು. ಈ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts