ಮೈಸೂರು: ಒಂದೇ ಕುಟುಂಬದ ನಾಲ್ವರು ಅತ್ಮಹತ್ಯೆಗೆ ಶರಣಾದ ಘಟನೆ (Suicide Case) ಮೈಸೂರಿನಲ್ಲಿ ವರದಿಯಾಗಿದೆ. ಕುಟುಂಬದ ಸದಸ್ಯರಾದ ಕುಶಾಲ್( 15,) ಚೇತನ್( 45), ರೂಪಾಲಿ (43) ಮತ್ತು ಪ್ರಿಯಂವದ (65) ಮೃತ ದುರ್ದೈವಿಗಳು.
ಇದನ್ನೂ ಓದಿ: Nikhil Kumaraswamy Statement | ಎರಡು ದಿನಗಳ ಕಾಲ ರೆಸ್ಟ್ ತಗೊಳ್ಳೋಕೆ ಡಾಕ್ಟರ್ ಸಲಹೆ ಕೊಟ್ಟಿದ್ದಾರೆ
ಮೈಸೂರಿನ ವಿಶ್ವೇರಯ್ಯನಗರದ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ಸಂಭವಿಸಿದೆ. ಮೊದಲು ಚೇತನ್ ತನ್ನ ತಾಯಿ, ಪತ್ನಿ ಹಾಗೂ ಮಗನಿಗೆ ವಿಷ ಉಣಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅವರ ಸಾವಿನ ಬಳಿಕ ತಾನು ನೇಣು ಬಿಗಿದು ಅತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಅನುಮಾನಿಸಿದ್ದಾರೆ. ಸ್ಥಳ ಪರಿಶೀಲಿಸಿದ ಪೊಲೀಸರಿಗೆ ಚೇತನ್ ಬರೆದಿಟ್ಟ ಡೆತ್ನೋಟ್ ಸಿಕ್ಕಿದೆ. ಅದರಲ್ಲಿ ಸಾಯುವುದರ ಹಿಂದಿರುವ ಕಾರಣವನ್ನು ತಿಳಿಸಿದ್ದಾರೆ.
ಡೆತ್ನೋಟ್ನಲ್ಲಿ ಏನಿದೆ?
“ಆರ್ಥಿಕ ಸಮಸ್ಯೆಯಿಂದಾಗಿ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಸಾವಿಗೆ ಬೇರಾರೂ ಕಾರಣರಲ್ಲ. ದಯವಿಟ್ಟು ನಮ್ಮ ಸ್ನೇಹಿತರಿಗೆ, ಸಂಬಂಧಿಕರಿಗೆ ತೊಂದರೆ ಕೊಡಬೇಡಿ. ಐ ಆ್ಯಮ್ ಸಾರಿ” ಎಂದು ಬರೆದಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಸಾವಿನ ಸುತ್ತ ಅನುಮಾನದ ಹುತ್ತ
ನಾಲ್ವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ ಅಧಿಕಾರಿ ಮೋಹಿತ್, ಡಿಸಿಪಿ ಜಾಹ್ನವಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಸಾವಿನ ಕುರಿತು ತನಿಖೆ ಆರಂಭಿಸಿದ್ದಾರೆ.