More

    ನಾಲ್ಕು ಜಿಲ್ಲೆಗಳಿಗೆ ವೈದ್ಯಕೀಯ ಕಾಲೇಜು ಮಂಜೂರು

    ಮೈಸೂರು: ವೈದ್ಯಕೀಯ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ವಸತಿ ನಿಲಯ ಸೇರಿದಂತೆ ನಾನಾ ಕಾಮಗಾರಿಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

    ನಗರದ ವಿನೋಬ ರಸ್ತೆಯಲ್ಲಿರುವ ವೈದ್ಯಕೀಯ ಮಹಿಳಾ(ಪಿ.ಜಿ.) ವಸತಿ ನಿಲಯದ ಆವರಣದಲ್ಲಿ 95 ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನರವೇರಿಸಿದರು. ಬಳಿಕ ಮಾತನಾಡಿ, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆ ನಿಭಾಯಿಸಲು ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿನಿಯರಿಗೆ ಹಳೆಯ ಹಾಸ್ಟೆಲ್ ಆವರಣದಲ್ಲಿ ಹಾಗೂ ಕೆಆರ್‌ಎಸ್ ರಸ್ತೆಯಲ್ಲಿರುವ ಮಹಿಳಾ ವಿದ್ಯಾರ್ಥಿನಿಯರ ವಸತಿ ನಿಲಯದ ಆವರಣದಲ್ಲಿ ಹೊಸದಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ 55 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

    ಮೈಸೂರು ವೈದ್ಯಕೀಯ ಕಾಲೇಜು ತನ್ನದೆ ಆದ ಇತಿಹಾಸವನ್ನು ಹೊಂದಿದ್ದು, 2024 ಕ್ಕೆ ಶತಮಾನೋತ್ಸವ ಆಚರಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಉತ್ತಮ ಗುಣಮಟ್ಟದಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ಹಾಸ್ಟೆಲ್ಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ರಾಜ್ಯದಲ್ಲಿ ಈ ಸಾಲಿನಲ್ಲಿ ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾವೇರಿ ಹಾಗೂ ಯಾದಗಿರಿಯ ನಾಲ್ಕು ಜಿಲ್ಲೆಗಳಿಗೆ ವೈದ್ಯಕೀಯ ಕಾಲೇಜು ಮಂಜೂರಾಗಿದ್ದು, ಕಾಮಗಾರಿ ಆರಂಭ ಮಾಡಬೇಕಿದೆ ಎಂದರು.

    ವೈದ್ಯಕೀಯ ಕಾಲೇಜಿಗೆ ಅವಶ್ಯಕತೆ ಇರುವಷ್ಟು ಸಿಬ್ಬಂದಿ ನೇಮಿಸಲಾಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಏಪ್ರಿಲ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದರು.

    ಶಾಸಕ ಎಲ್.ನಾಗೇಂದ್ರ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಡೀನ್ ಮತ್ತು ನಿರ್ದೇಶಕ ಡಾ.ನಂಜರಾಜ, ಪಾಲಿಕೆ ಸದಸ್ಯ ಪ್ರಮೀಳಾ ಭರತ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts