ಜಮ್ಮು-ಕಾಶ್ಮೀರ: ಉಗ್ರರೊಂದಿಗೆ ಗುಂಡಿನ ಚಕಮಕಿ, ನಾಲ್ವರು ಯೋಧರು ಹುತಾತ್ಮ

ವಿಜಯವಾಣಿ (29)
Published on

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸೋಮವಾರ (ಜು.15) ರಾತ್ರಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಭಾರತೀಯ ಸೇನಾ ಯೋಧರು ಇಂದು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ.

ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ ಪಡೆಗಳು ರಾತ್ರಿ 7.45ರ ಸುಮಾರಿಗೆ ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಬೆನ್ನಲ್ಲೇ ಈ ಎನ್‌ಕೌಂಟರ್ ಎದುರಾಯಿತು. ಭಾರತೀಯ ಸೇನೆಯ ಕಣ್ತಪ್ಪಿಸಿ ಹೋಗುತ್ತಿದ್ದ ಉಗ್ರರನ್ನು ಯೋಧರು ಪತ್ತೆಹಚ್ಚುತ್ತಿದ್ದಂತೆ ಗುಂಡಿನ ದಾಳಿ ನಡೆದಿದೆ. ಆರಂಭದಲ್ಲಿ 20 ನಿಮಿಷಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು.

ಒಟ್ಟು ಐವರು ಯೋಧರು ಉಗ್ರರೊಂದಿಗೆ ಹೋರಾಡುವಾಗ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಆರಂಭದಲ್ಲಿ ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಮತ್ತು ಅವರ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಭಾರತೀಯ ಸೇನೆ ತಿಳಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net