ಕಾರು ಪಲ್ಟಿಯಾಗಿ ನಾಲ್ವರಿಗೆ ಗಾಯ

blank

ಮದ್ದೂರು: ತಾಲೂಕಿನ ನಿಡಘಟ್ಟ ಸಮೀಪದ ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಸೋಮವಾರ ಮಧ್ಯಾಹ್ನ ಕಾರು ಚಾಲಕನ ನಿಯಂತ್ರಣ ಕಾರು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಸೇರಿದಂತೆ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಂಡಮಾನ್ ನಿಕೋಬಾರ್ ಮೂಲದ ನಾಲ್ವರು ಗಾಯಾಳುಗಳ ಪೈಕಿ ಓರ್ವ ಯುವತಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರಿಗೆ ಚನ್ನಪಟ್ಟಣ ಸಮೀಪದ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಗಾಯಾಳುಗಳು ಹೆಸರು ತಿಳಿದು ಬಂದಿಲ್ಲ.

ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರೂ ಅಂಡಮಾನ್ ನಿಕೋಬಾರ್ ಮೂಲದವರೆಂದು ಗೊತ್ತಾಗಿದ್ದು. ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ. ವಾರದ ರಜೆ ಹಿನ್ನೆಲೆಯಲ್ಲಿ ಮೈಸೂರು ಪ್ರವಾಸಕ್ಕೆ ತೆರಳಿದ್ದ ಎಲ್ಲರೂ ಬೆಂಗಳೂರಿಗೆ ವಾಪಸ್ ಆಗುತ್ತಿದ್ದರು ಎನ್ನಲಾಗಿದೆ.ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ

ನಿಡಘಟ್ಟ ಸಮೀಪದ ಅಣ್ಣೇಗೌಡರ ಪೆಟ್ರೋಲ್ ಬ್ಯಾಂಕ್ ಎದುರು ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದ ನಂತರ ಕಾರಿನ ಮುಂಭಾಗದ ಚಕ್ರಗಳು ಡಿಸ್ಕ್ ಸಮೇತ ಕಿತ್ತು ಬಂದ ರಭಸಕ್ಕೆ ಕಾರು ನಾಲ್ಕೈದು ಬಾರಿ ಪಲ್ಟಿಯಾಗಿ ಬಿದ್ದು, ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿತ್ತು. ಸ್ಥಳಕ್ಕೆ ಧಾವಿಸಿದ ಸಂಚಾರ ಠಾಣೆ ಪೊಲೀಸರು ಕ್ರೇನ್ ಸಹಾಯದಿಂದ ಕಾರನ್ನು ರಸ್ತೆಯಿಂದ ತೆರವುಗೊಳಿಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…