ಟ್ರಕ್​-ಕಾರು ಮುಖಾಮುಖಿ ಡಿಕ್ಕಿ; ನಾಲ್ವರು ಸಾವು, ಇಬ್ಬರು ಗಂಭೀರ

Road Accident
Published on

ಲಖನೌ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ.

ಜನವರಿ 24ರ ರಾತ್ರಿ 11 ಘಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ರಾಹುಲ್ ಕುಮಾರ್ (25), ವಿನಯ್ ಶರ್ಮಾ (27), ಆಕಾಶ್ (22) ಮತ್ತು ಗೋಪಾಲ್ (24) ಎಂದು ಗುರುತಿಸಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೃತರು ಗೋರಾ ಮತ್ತು ದಹೇನಾ ಗ್ರಾಮಗಳ ನಿವಾಸಿಗಳಾಗಿದ್ದು, ಶುಕ್ರವಾರ ರಾತ್ರಿ ಕಟೇಲಿ ಗ್ರಾಮದ ಬಳಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ಟ್ರಕ್​ಅನ್ನು ವಶಕ್ಕೆ ಪಡೆಯಲಾಗಿದೆ. ತಲೆಮಾರಿಸಿಕೊಂಡಿರುವ ಚಾಲಕನಿಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net