ಗ್ರೇಟರ್ ನೋಯ್ಡಾದಲ್ಲಿ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಸಾವು

noida
Published on

ಗ್ರೇಟರ್ ನೋಯ್ಡಾ: ಗ್ರೇಟರ್ ನೋಯ್ಡಾದ ಡ್ರೀಮ್ ವ್ಯಾಲಿ ಪ್ರಾಜೆಕ್ಟ್ ನಿರ್ಮಾಣ ಸ್ಥಳದಲ್ಲಿ ದೊಡ್ಡ ಅಪಘಾತ ಸಂಭವಿಸಿದೆ. ಈ ನಿರ್ಮಾಣ ಸ್ಥಳದಲ್ಲಿ ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ ನೋಯ್ಡಾ ಸಿಇಒ ಎನ್‌ಜಿ ರವಿ ಮತ್ತು ಜಿಲ್ಲಾಧಿಕಾರಿ ಮನೀಶ್ ಕುಮಾರ್ ವರ್ಮಾ ಅವರು ಕಾರ್ಮಿಕರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಜಿಲ್ಲಾ ಆಸ್ಪತ್ರೆಗೆ ತೆರಳಿದರು. ಅಧಿಕಾರಿಗಳು ಕೂಡ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಈ ಯೋಜನೆಯಲ್ಲಿ ಬಿಲ್ಡರ್ 26 ಅಂತಸ್ತಿನ ಕಟ್ಟಡವನ್ನು ನಿರ್ಮಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಅಪಘಾತದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಗ್ರೇಟರ್ ನೋಯ್ಡಾದ ಆಮ್ರಪಾಲಿ ಬಿಲ್ಡರ್ಸ್‌ನ ನಿರ್ಮಾಣ ಹಂತದಲ್ಲಿದ್ದ ಲಿಫ್ಟ್ ಕುಸಿತದ ಕುರಿತು ಡಿಎಂ ಮನೀಶ್ ವರ್ಮಾ ಅವರು, ನಿರ್ಮಾಣ ಹಂತದ ಸ್ಥಳದಲ್ಲಿ ಅಪಘಾತ ಸಂಭವಿಸಿದೆ, ಇದರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಐವರ ಸ್ಥಿತಿಗತಿ ಚಿಂತಾಜನಕ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮ ತಂಡ ಜಿಲ್ಲಾಸ್ಪತ್ರೆಯಲ್ಲಿದೆ. ನಮ್ಮ ಅಧಿಕಾರಿಗಳು ಕೂಡ ಸ್ಥಳದಲ್ಲಿ ಇದ್ದಾರೆ. ಅಲ್ಲಿ ಯಾರೂ ಸಿಲುಕಿಕೊಂಡಿಲ್ಲ. ಗಾಯಗೊಂಡವರಿಗೆಲ್ಲ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net