24.9 C
Bangalore
Wednesday, December 11, 2019

ಮಹಿಳಾ ಪಶುವೈದ್ಯಾಧಿಕಾರಿ ಹತ್ಯೆಗೆ ರಾಜ್ಯಸಭೆಯಲ್ಲಿ ಆಕ್ರೋಶ; ಆರೋಪಿಗಳನ್ನೆಲ್ಲ ಪಬ್ಲಿಕ್​​ನಲ್ಲಿ ಹೊಡೆದು ಕೊಲ್ಲಬೇಕು ಎಂದ ಜಯಾ ಬಚ್ಚನ್​

Latest News

ಬನುಮಯ್ಯ ಸಂಸ್ಥೆ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು....

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ನವದೆಹಲಿ: ತೆಲಂಗಾಣ ಪಶುವೈದ್ಯಾಧಿಕಾರಿಯನ್ನು ಅತ್ಯಾಚಾರ ಮಾಡಿ ಬಳಿಕ ಬೆಂಕಿಯಿಂದ ಸುಟ್ಟು ಬರ್ಬರವಾಗಿ ಹತ್ಯೆಗೈದ ನಾಲ್ವರು ಲಾರಿ ಚಾಲಕರು ಹಾಗೂ ಅಂತಹ ಆರೋಪಿಗಳನ್ನೆಲ್ಲ ಸಾರ್ವಜನಿಕವಾಗಿ ಹೊಡೆದು ಕೊಲ್ಲಬೇಕು ಎಂದು ರಾಜ್ಯ ಸಭೆ ಸದಸ್ಯೆ ಜಯಾ ಬಚ್ಚನ್​ ಹೇಳಿದರು.
ಇಂದು ರಾಜ್ಯಸಭೆ ಅಧಿವೇಶನದ ವೇಳೆ ತೆಲಂಗಾಣ ಮಹಿಳಾ ಪಶುವೈದ್ಯಾಧಿಕಾರಿ ಭೀಕರ ಹತ್ಯೆಯ ಬಗ್ಗೆ ಚರ್ಚೆ ನಡೆದ ವೇಳೆ ಜಯಾ ಬಚ್ಚನ್​ ಸೇರಿ ಹಲವು ಎಂಪಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಎಐಎಡಿಎಂಕೆ ಸಂಸದೆ ವಿಜಿಲಾ ಸತ್ಯನಾಥ್​ ಅವರೂ ಕೂಡ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ಡಿ.31ರೊಳಗೆ ನೇಣಿಗೇರಿಸಬೇಕು ಎಂದು ಹೇಳಿದರು.

ಇಂತಹ ಅತ್ಯಾಚಾರ, ಕೊಲೆ ಪ್ರಕರಣಗಳನ್ನು ತಡೆಯಲು ಕೇವಲ ಶಾಸನ, ಕಾಯ್ದೆಗಳಿಂದ ಸಾಧ್ಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಒಂದು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಂ ನಭಿ ಆಜಾದ್​ ತಿಳಿಸಿದರು.

ಬಳಿಕ ಮಾತನಾಡಿದ ರಾಜ್ಯಸಭಾ ಅಧ್ಯಕ್ಷ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಇಂತಹ ಅಪರಾಧಗಳನ್ನು ತಡೆಯಲು ಬೇಕಾಗಿರುವುದು ಹೊಸ ಮಸೂದೆಗಳಲ್ಲ. ರಾಜಕೀಯ ಇಚ್ಛಾಶಕ್ತಿ, ಆಡಳಿತ ಕೌಶಲಗಳು ಬೇಕು. ಅದಕ್ಕೂ ಮುಖ್ಯವಾಗಿ ಇಂತಹ ಕ್ರೂರ ಮನಸ್ಥಿತಿಗಳು ಬದಲಾಗಬೇಕು ಎಂದು ಹೇಳಿದರು.

ತೆಲಂಗಾಣ ಮಹಿಳಾ ಪಶುವೈದ್ಯಾಧಿಕಾರ ಹತ್ಯೆ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪಿಗಳ ವಿಚಾರಣೆಗಾಗಿ ಫಾಸ್ಟ್​ಟ್ರಾಕ್​ ಕೋರ್ಟ್​ ನಿರ್ಮಾಣ ಮಾಡುವಂತೆ ಅಲ್ಲಿನ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಆದೇಶ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ಕೂಡ ಈ ಕ್ರೂರ ಕೃತ್ಯವನ್ನು ಬಲವಾಗಿ ಖಂಡಿಸಲಾಗುತ್ತಿದೆ.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...