More

    ಮಣಿಪುರದಲ್ಲಿ ಮತ್ತೊಮ್ಮೆ ಭುಗಿಲೆದ್ದ ಹಿಂಸಾಚಾರ; ಮೈತೇಯಿ ಸಮುದಾಯದ ನಾಲ್ವರ ಹತ್ಯೆ

    ಮಣಿಪುರ: ಸಂಘರ್ಷಪೀಡಿತ ಮಣಿಪುರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದ್ದು, ಮೈತೇಯಿ ಸಮುದಾಯಕ್ಕೆ ಸೇರಿದ ನಾಲ್ವರನ್ನು ಕುಕಿ ಸಮುದಾಯದವರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆಯು ಬಿಷ್ಣುಪುರ್ ಮತ್ತು ಚುರಾಚಂದ್‌ಪುರ ಜಿಲ್ಲೆಗಳ ಅರಣ್ಯ ಪ್ರದೇಶದಲ್ಲಿ ನಡೆದಿದೆ.

    ಮೃತರು ಬಿಷ್ಣುಪುರ್ ಜಿಲ್ಲೆಯ ಅಕಾಸೋಯಿ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದ್ದು, ಕಾಡಿನಲ್ಲಿ ಕಟ್ಟಿಗೆ ಸಂಗ್ರಹಿಸಲು ತೆರಳಿದ್ದರು ಎಂದು ತಿಳಿದು ಬಂದಿದೆ. ಈ ವೇಳೆ ನಾಲ್ವರನ್ನು ಅಪಹರಿಸಿದ ಕುಕಿ ಸಮುದಾಯದ ವ್ಯಕ್ತಿಗಳು ಹತ್ಯೆ ಮಾಡಿ ಬಳಿಕ ಅದರ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಇದನ್ನೂ ಓದಿ: ರೋಹಿತ್​-ಕೊಹ್ಲಿ ಉಪಸ್ಥಿತಿ ತಂಡಕ್ಕೆ ಹೆಚ್ಚು ಉಪಕಾರಿಯಾಗಲಿದೆ: ಸುರೇಶ್​ ರೈನಾ

    ಆದರೆ, ಮಣಿಪುರ ಪೊಲೀಸರು ಈ ಬಗ್ಗೆ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಮೂರು ಶವಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಇನ್ನೋರ್ವ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿರುವ ಪೊಲೀಸರು ಭದ್ರತಾ ಪಡೆಗಳ ನೆರವಿನೊಂದಿಗೆ ದುಷ್ಕರ್ಮಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

    ಕಳೆದ ವರ್ಷ ಮೇ ತಿಂಗಳಲ್ಲಿ ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಶುರುವಾದ ಘರ್ಷಣೆಯಿಂದಾಗಿ ಈವರೆಗೆ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 60 ಸಾವಿರಕ್ಕೂ ಅಧಿಕ ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts