ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಹೋದರಿಯರು ಸುಟ್ಟು ಸಜೀವ ದಹನ!

Four Minor Sisters
Published on

ಪಾಟ್ನಾ: ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರ ಗುಡಿಸಲಿನಲ್ಲಿ ಬೆಂಕಿ ಕಾಣಿಸಿಕೊಂಡು ಸಜೀವ ದಹನವಾಗಿರುವ ಘಟನೆ ಮಂಗಳವಾರ ನಡೆದಿದೆ.

ಪೊಲೀಸರ ಪ್ರಕಾರ, ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಮದಯಾಳು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸೋನಿ ಕುಮಾರಿ (12), ಶಿವಾನಿ ಕುಮಾರಿ (8), ಅಮೃತಾ ಕುಮಾರಿ (5) ಮತ್ತು ರೀಟಾ ಕುಮಾರಿ (3) ಮೃತರು. ನರೇಶ್ ರಾಮ್ ಎಂಬಾತನ ಪುತ್ರಿಯರು. ಹುಡುಗಿಯರು ಮಲಗಿದ್ದಾಗ ಅವರ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಒಳಗಿದ್ದರು ಎನ್ನಲಾಗಿದೆ.

ಈ ದುರ್ಘಟನೆಯಲ್ಲಿ ಏಳು ಮಂದಿಗೆ ಸುಟ್ಟ ಗಾಯಗಳಾಗಿದ್ದು, ಜಿಲ್ಲೆಯ ಶ್ರೀಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಸದರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾತನಾಡಿ, “ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಾವನ್ನಪ್ಪಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ. ಗಾಯಗೊಂಡ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net