ಚಿತ್ರದುರ್ಗದ ಮಲ್ಲಾಪುರ ಬಳಿ ಡೆಡ್ಲಿ ಅಪಘಾತ: ಮಲೆನಾಡಿಗೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರ ಸಾವು

CTD Accident
Published on

ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಇಂದು (ಆ.13) ಮುಂಜಾನೆ ನಡೆದಿದೆ.

ಮೃತರನ್ನು ಸಂಗನ ಬಸವಪ್ಪ (36), ಪತ್ನಿ ರೇಖಾ (29), ಪುತ್ರ ಅಗಸ್ತ್ಯ (07) ಹಾಗೂ ಸಂಬಂಧಿ ಭೀಮಾ ಶಂಕರ್ (26) ಎಂದು ಗುರುತಿಸಲಾಗಿದೆ. ಮತ್ತೋರ್ವ ಪುತ್ರ ಆದರ್ಶ(3), ಪುತ್ರಿ ಅನ್ವಿಕಾ (5) ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಯೊಂದಕ್ಕೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೃತ ಸಂಗನ ಬಸವಪ್ಪ ಖಾಸಗಿ ಬ್ಯಾಂಕ್ ನೌಕರರಾಗಿದ್ದು, ಕುಟುಂಬದ ಜತೆ ವೀಕೆಂಡ್​ ರಜೆ ಹಿನ್ನೆಲೆಯಲ್ಲಿ ಮಲೆನಾಡು ಟ್ರಿಪ್ ಹೊರಟಿದ್ದರು. ವಿಜಯಪುರದಿಂದ ಚಿಕ್ಕಮಗಳೂರಿಗೆ ತೆರಳುವ ವೇಳೆ ಚಿತ್ರದುರ್ಗದ ಮಲ್ಲಾಪುರ ಬಳಿ ಡೆಡ್ಲಿ ಅಪಘಾತ ಘಟಿಸಿದೆ.

ಮೃತರು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಮೂಲದವರು ಎಂದು ತಿಳಿದುಬಂದಿದೆ. ಅಪಘಾತ ನಡೆದ ಚಿತ್ರದುರ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ. ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net