More

    ಮಾರಕ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಮಾನನಿಲ್ದಾಣದಲ್ಲಿ ತೀವ್ರ ತಪಾಸಣೆ: ನಾಲ್ವರ ಮೇಲೆ ನಿಗಾ

    ಬೆಂಗಳೂರು: ಮಾರಕ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಾಲ್ವರ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆ ತಿಳಿಸಿದೆ.

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನವರಿ 28ರವರೆಗೆ 3,275 ಪ್ರಯಾಣಿಕರನ್ನು ತಪಾಸಣೆ ನಡೆಸಲಾಗಿದೆ. ಮಂಗಳವಾರ 224 ಮಂದಿಯನ್ನು ತಪಾಸಣೆಗೊಳಪಡಿಸಲಾಯಿತು ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿ ಬಿ.ಟಿ. ಪ್ರಕಾಶ ಕುಮಾರ್​ ತಿಳಿಸಿದರು.

    3.275 ಪ್ರಯಾಣಿಕರಲ್ಲಿ ಕೇವಲ ಮೂರು ಮಂದಿ ಮಾತ್ರ ಚೀನಾದ ವೂಹಾನ್​ಗೆ ಭೇಟಿ ನೀಡಿದ್ದರು. ಪರೀಕ್ಷೆಗೊಳಪಟ್ಟ ಯಾರಲ್ಲೂ ಕೊರೊನಾ ವೈರಸ್​ ಕಂಡು ಬಂದಿಲ್ಲ ಎಂದು ಮಾಹಿತಿ ನೀಡಿದರು.

    ಐವರು ಪ್ರಯಾಣಿಕರನ್ನು ತೀವ್ರ ತಪಾಸಣೆ ಒಳಪಡಿಸಲಾಗಿದೆ. ಅದರಲ್ಲಿ ವೈರಸ್​ ಇಲ್ಲದ್ದರಿಂದ ಒಬ್ಬರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಯಾರಿಗೂ ವೈರಸ್​ ತಗುಲಿಲ್ಲಿ. ಆದರೂ ಅವರ ಬಗ್ಗೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

    ಮಾರಣಾಂತಿಕ ಕೊರೊನಾ ವೈರಸ್ ಚೀನಾದಲ್ಲಿ ಅತಿ ಹೆಚ್ಚು ಹಾನಿ ಮಾಡಿದೆ. ಹುಬೈ ಎಂಬಲ್ಲಿ 25 ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 132 ಕ್ಕೇರಿದೆ. ಮಾರಕ ವೈರಸ್​ ಸೋಂಕಿತ ಪ್ರಕರಣಗಳು ಸುಮಾರು 6,000 ಕ್ಕೆ ತಲುಪಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಮುಂದಿನ 10 ದಿನಗಳಲ್ಲಿ ಸಾಂಕ್ರಾಮಿಕ ರೋಗವು ಪರಾಕಾಷ್ಠೆಯನ್ನು ತಲುಪಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ ಎಂದು ತಿಳಿಸಿವೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts