ಎಸ್ಪಿ ಸೇರಿ ನಾಲ್ವರಿಗೆ ಡಿಜಿ-ಐಜಿಪಿ ಪದಕ

Police
Published on

ಉಡುಪಿ ಜಿಲ್ಲಾ ಪೊಲೀಸ್​ ಇಲಾಖೆಗೆ ಪ್ರಶಸ್ತಿ

ವಿಜಯವಾಣಿ ಸುದ್ದಿಜಾಲ ಉಡುಪಿ

ರಾಜ್ಯದಲ್ಲಿ ಪ್ರಥಮ ಬಾರಿಗೆ ಆರಂಭಿಸಲಾದ ಡಿಜಿ-ಐಜಿಪಿ ಪ್ರಶಂಸಾ ಪದಕ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್​ ಇಲಾಖೆಯ ನಾಲ್ವರು ಆಯ್ಕೆಯಾಗಿದ್ದಾರೆ.

ಜಿಲ್ಲಾ ಪೊಲೀಸ್​ ವರಿಷ್ಠ ಡಾ. ಕೆ.ಅರುಣ, ಮಲ್ಪೆ ಕರಾವಳಿ ಕಾವಲು ಪೊಲೀಸ್​ನ ಎಸ್​ಐ ವೈಲೆಟ್​ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್​ ಠಾಣೆಯ ಹೆಡ್​ ಕಾನ್​ಸ್ಟೇಬಲ್​ ಗುರುದಾಸ, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್​ ಕಾನ್​ಸ್ಟೇಬಲ್​ ಸಂತೋಷ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net