More

    ಹೃದಯವಿದ್ರಾವಕ ಘಟನೆ: ಕನ್ಸರ್ಟ್​ನಲ್ಲಿ ಕಾಲ್ತುಳಿತ! ನಾಲ್ವರು ವಿದ್ಯಾರ್ಥಿಗಳು ಮೃತ್ಯು

    ಕೊಚ್ಚಿ: ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದ್ದು, ಗಾಯಕಿ ನಿಖಿತಾ ಗಾಂಧಿ ಅವರ ಸಂಗೀತ ಕಾರ್ಯಕ್ರಮದ ವೇಳೆ ನೂಕುನುಗ್ಗಲು ಉಂಟಾಗಿ ನಾಲ್ವರು ವಿದ್ಯಾರ್ಥಿಗಳು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಕದನ ವಿರಮ ಉಲ್ಲಂಘನೆ;17 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

    ವಿಶ್ವವಿದ್ಯಾನಿಲಯದ ವಾರ್ಷಿಕ ಕಾರ್ಯಕ್ರಮದ ವೇಳೆ ಕ್ಯಾಂಪಸ್‌ನ ತೆರೆದ ಸಭಾಂಗಣದಲ್ಲಿ ಈ ದುರಂತ ಸಂಭವಿಸಿದೆ. ಕಲಮಸ್ಸೆರಿ ವೈದ್ಯಕೀಯ ಕಾಲೇಜಿನಲ್ಲಿ ಇಬ್ಬರು ಯುವಕರು ಮತ್ತು ಇಬ್ಬರು ಯುವತಿಯರ ಮೃತದೇಹ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ದೃಢಪಡಿಸಿದ್ದಾರೆ.

    ಘಟನೆಯಲ್ಲಿ ಗಾಯಗೊಂಡ ಇತರರನ್ನು ಕಲಮಸ್ಸೆರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಇತರ ವೈದ್ಯಕೀಯ ಸೌಲಭ್ಯಗಳಿಗೆ ತ್ವರಿತವಾಗಿ ಕರೆದೊಯ್ಯಲಾಗಿದ್ದು, ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಿಕಿತಾ ಗಾಂಧಿ ಅವರ ಗಾಯನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹೆಚ್ಚಿನ ವಿದ್ಯಾರ್ಥಿಗಳು, ಈ ದುರಂತಕ್ಕೆ ತುತ್ತಾಗಿದ್ದು, ತಮ್ಮ ಜೀವವನ್ನು ಕಳೆದುಕೊಂಡಿದ್ದಾರೆ.

    ಇದನ್ನೂ ಓದಿ: VIDEO | ಬೆಂಗಳೂರು ಕಂಬಳ ಕಣ್ತುಂಬಿಕೊಂಡ ಜಪಾನ್​ ಪ್ರಜೆ; ಸಂತಸದಿಂದ ಹಂಚಿಕೊಂಡ ವಿಷಯಗಳಿವು

    ದಿಢೀರ್​ ಕಾಲ್ತುಳಿತಕ್ಕೆ ಕಾರಣವೇನು?: ಕಾರ್ಯಕ್ರಮ ನಡೆಯುವ ವೇಳೆಗೆ ಹಠಾತ್ ಮಳೆ ಆವರಿಸಿಕೊಂಡ ಕಾರಣ ಹಾಜರಿದ್ದವರು ಕೂಡಲೇ ಸ್ಥಳದಿಂದ ಓಡಲು ಪ್ರಾರಂಭಿಸಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿದ್ದು, ತಪ್ಪಿಸಿಕೊಳ್ಳಲಾಗದೆ ಸಿಲುಕಿದ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಈ ದುರಂತಕ್ಕೆ ಸ್ಪಂದಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿದ್ಯಾರ್ಥಿಗಳ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ಪರಿಹರಿಸಲು ತುರ್ತು ಸಭೆಯನ್ನು ಕರೆದಿದ್ದಾರೆ. ಉತ್ತರ ಜಿಲ್ಲೆಯಲ್ಲಿ ನಡೆಯುತ್ತಿರುವ ನವ ಕೇರಳ ಸದಸ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಿಗದಿಯಾಗಿದ್ದ ಸಾಂಸ್ಕೃತಿಕ ಮತ್ತು ಕಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು, ಕ್ಯಾಂಪಸ್‌ನಲ್ಲಿ ಪರಿಹಾರ ಕಾರ್ಯಗಳನ್ನು ಸಂಘಟಿಸುವಂತೆ ಸಚಿವರಿಗೆ ಸೂಚಿಸಿದ್ದಾರೆ,(ಏಜೆನ್ಸೀಸ್).

    ಪ್ರಧಾನಿ ಭದ್ರತಾ ಲೋಪ: ಕರ್ತವ್ಯಲೋಪ ಆರೋಪದಡಿ ಎಸ್ಪಿ ಗುರ್ಬಿಂದರ್ ಸಿಂಗ್ ಅಮಾನತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts