More

    ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತ್ಯು

    ಅಮರಾವತಿ: ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಮುಳುಗಿ ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಯಲ್ಲಿ ನಡೆದಿದೆ. ಗೌತಮಿ-ಗೊದಾವರಿ ನದಿಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

    ನದಿಯಿಂದ ನಾಲ್ವರು ವಿದ್ಯಾರ್ಥಿಗಳ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಶನಿವಾರ ಸಂಜೆ 4:30ರ ಸುಮಾರಿಗೆ ಏಳು ಮಂದಿ ವಿದ್ಯಾರ್ಥಿಗಳು ಈಜಲೆಂದು ಗೊದಾವರಿ ನದಿಗೆ ಇಳಿದಿದ್ದಾರೆ. ಈ ವೇಳೆ ನಾಲ್ವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದು, ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ.

    ಇದನ್ನೂ ಓದಿ: ರಸ್ತೆಬದಿ ಗೋಲ್​ಗಪ್ಪಾ ಸೇವನೆ; ಮಹಿಳೆಯರು, ಮಕ್ಕಳು ಸೇರಿದಂತೆ 50 ಮಂದಿ ಆಸ್ಪತ್ರೆಗೆ ದಾಖಲು

    ಮೃತರು ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕಾಲೇಜಿಗೆ ರಜೆ ಇದ್ದ ಕಾರಣ ಸ್ನೇಹಿತರ ಜತೆಗೂಡಿ ಪ್ರವಾಸಕ್ಕೆಂದು ಬಂದಿದ್ದರು. ಮೊದಲು ಯಾನಂಗೆ ತೆರಳಿದ್ದ ವಿದ್ಯಾರ್ಥಿಗಳು ಆ ನಂತರ ಇಲ್ಲಿಗೆ ಆಗಮಿಸಿದ್ದರು. ಈಜುವ ವೇಳೆ ಬಲವಾದ ಅಲೆಯ ಹೊಡೆತಕ್ಕೆ ಸಿಲುಕಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

    ಘಟನೆ ಸಂಬಂಧ CRPC 174ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts