More

    ಸಹ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ: ಸಿಐಡಿ ಪೊಲೀಸರಿಂದ ನಾಲ್ವರು ಸಹ ಶಿಕ್ಷಕರ ಬಂಧನ

    ಬೆಂಗಳೂರು: ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದ ಸಂಬಂಧ ಸಿಐಡಿ ಪೊಲೀಸರು ರಾಜ್ಯದ ವಿವಿಧೆಡೆ ಕಾರ್ಯಾಚರಣೆ ನಡೆಸಿ ನಾಲ್ವರು ಶಿಕ್ಷಕರನ್ನು ಬಂಧಿಸಿದ್ದಾರೆ. ಆರೋಪಿಗಳ ಪಟ್ಟಿ 64ಕ್ಕೆ ಏರಿದೆ. ತಲೆಮರೆಸಿಕೊಂಡಿರುವ ಶಿಕ್ಷಕರು, ಶಿಕ್ಷಣ ಇಲಾಖೆ ಹಾಲಿ, ಮಾಜಿ ಅಧಿಕಾರಿಗಳ ಪತ್ತೆಗೆ ಸಿಐಡಿ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ.

    ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಸರ್ಕಾರಿ ಪ್ರೌಢಶಾಲೆಯ ಸೋಮನಗೌಡ ಪಾಟೀಲ್, ವಿಜಯಪುರ ಜಿಲ್ಲೆ ಕಪನಿಂಬರಗಿ ಜಿಎಚ್‌ಎಸ್ ಶಾಲೆಯ ಪ್ರತಾಪ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೊರಟಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಟಿ.ಯೋಗೇಶಪ್ಪ ಮತ್ತು ರಾಮನಗರ ಜಿಲ್ಲೆ ಮಾಗಡಿಯ ತಿಪ್ಪಗೊಂಡನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಜಯಪ್ಪ ಬಂಧಿತರು. ಆರೋಪಿಗಳನ್ನು ನಗರಕ್ಕೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕೋರ್ಟ್ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವಿಜಯಪುರ ಜಿಲ್ಲೆಯಲ್ಲಿ ಪ್ರತಾಪ್, ಸೇವೆ ಸಲ್ಲಿಸುತ್ತಿದ್ದರು. ಅದೇ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನಿಯೋಜಿತಗೊಂಡಿದ್ದ ಜಯಪ್ಪ, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಇನ್ನುಳಿದ ಇಬ್ಬರು ತಾವು ನೇಮಕಗೊಂಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿ ನಿರ್ವಹಿಸುತ್ತಿದ್ದರು.

    2012-13 ಮತ್ತು 2014-15ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ಸಂಬಂಧ ವಿಧಾನಸೌಧ ಹಾಗೂ ಹಲಸೂರು ಗೇಟ್ ಠಾಣೆಗಳಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ದೂರು ನೀಡಿದ್ದರು. ಇದರ ಮೇರೆಗೆ ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದವು. ಹೆಚ್ಚಿನ ತನಿಖೆ ಕೈಗೊಂಡ ಸಿಐಡಿ ಅಧಿಕಾರಿಗಳು, ಆರೋಪಿತ ಶಿಕ್ಷಕರು ಮತ್ತು ಅಧಿಕಾರಿಗಳು ಬಂಧಿಸುತ್ತಿದ್ದಾರೆ.

    ಜಿಪಂ, ತಾಪಂ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

    ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts