20.1 C
Bangalore
Friday, December 6, 2019

ಲೋಕಸಭಾ ಚುನಾವಣೆ: ಟಿಡಿಪಿಯಿಂದ ವೈಎಸ್‌ಆರ್‌ ಕಾಂಗ್ರೆಸ್‌ಗೆ ಸೇರಿದ ನಾಲ್ವರು ನಾಯಕರು

Latest News

ಋಣುಮುಕ್ತ ಕಾಯ್ದೆ ಅವಧಿ ವಿಸ್ತರಿಸಿ

ಚಳ್ಳಕೆರೆ: ಋಣಮುಕ್ತ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಧಿಕಾರಿಗಳಿಂದ ಆಗಿಲ್ಲ ಎಂದು ಆರೋಪಿಸಿ ನಗರಸಭೆ ಮಾಜಿ ಸದಸ್ಯರಾದ ಟಿ.ಜೆ.ವೆಂಕಟೇಶ್, ಜಿ.ಕೆ.ರವಿ...

ಅಹವಾಲು ಸ್ವೀಕರಿಸಿದ ಎಸಿಬಿ

ಹಿರಿಯೂರು: ತಾಪಂ ಸಭಾಂಗಣದಲ್ಲಿ ಗುರುವಾರ ಚಿತ್ರದುರ್ಗ ಜಿಲ್ಲಾ ಭಷ್ಟಾಚಾರ ನಿಗ್ರಹದಳದ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಎಸಿಬಿ ಡಿವೈಎಸ್‌ಪಿ ನರಸಿಂಹ ವಿ ತಾಮ್ರಧ್ವಜ ಮಾತನಾಡಿ,...

ಎಲ್ಲ ಮಠಾಧೀಶರು ಅಭಿಯಾನ ಆರಂಭಿಸಲಿ

ಚಿತ್ರದುರ್ಗ: ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನದಿಂದ ಆಯೋಜಿಸಿರುವ ಭಗವದ್ಗೀತಾ ಅಭಿಯಾನದ ನಿಮಿತ್ತ ಶುಕ್ರವಾರ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಭಾಷಣ, ಭಗವದ್ಗೀತೆ ಕಂಠಪಾಠ...

ಕೋಟೆ ನಾಡಲ್ಲಿಂದು ಭಗವದ್ಗೀತಾ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ವ್ಯಕ್ತಿತ್ವ ವಿಕಸನ, ಸಾಮಾಜಿಕ ಸಾಮರಸ್ಯ, ದೇಶದ ಏಕತೆ ಸಲುವಾಗಿ ಶಿರಸಿ ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ನಡೆದಿರುವ...

14ರಂದು ಲೋಕ್ ಅದಾಲತ್

ಚಿತ್ರದುರ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಶ್ರಯದಲ್ಲಿ ನ.14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಲೋಕ್ ಆದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು...

ಹೈದರಾಬಾದ್‌: ಲೋಕಸಭಾ ಚುನಾವಣೆ ಮತ್ತು ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಒಂದೇ ವಾರ ಬಾಕಿಯಿರುವಾಗಲೇ ತೆಲುಗು ದೇಶಂ ಪಾರ್ಟಿ(TDP)ಯ ನಾಲ್ವರು ನಾಯಕರು ವೈಎಸ್‌ಆರ್‌ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಪಿಥಾಪುರಂ ವಂಗಾ ಕ್ಷೇತ್ರದ ಮಾಜಿ ಶಾಸಕಿ ಗೀತಾ, ಹಿರಿಯ ಟಿಡಿಪಿ ನಾಯಕ ಅದಲಾ ಪ್ರಭಾಕರ್‌ ರೆಡ್ಡಿ, ಮಾಜಿ ಟಿಡಿಪಿ ಎಂಎಲ್‌ಸಿ ಮಾಗುಂಟಾ ಶ್ರೀನಿವಾಸಲು ರೆಡ್ಡಿ ಮತ್ತು ಬುಟ್ಟಾ ರೇಣುಕಾ ವೈಎಸ್‌ಆರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದು ಈಗಾಗಲೇ ಏರಿಳಿತ ಕಾಣುತ್ತಿರುವ ಟಿಡಿಪಿಗೆ ಭಾರಿ ಹೊಡೆತ ಬಿದ್ದಂತಾಗಿದೆ.

ಪ್ರಜಾ ರಾಜ್ಯಂ ಪಕ್ಷದಿಂದ 2009 ರಿಂದ 2014ರಲ್ಲಿ ಪಿತಪುರಂ ಲೋಕ ಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಗೀತಾ ಅವರು ಇಂದು ಹೈದರಾಬಾದ್‌ನಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಸದ್ಯ ರಾಜ್ಯಸಭೆಯಲ್ಲಿ ಟಿಡಿಪಿ ಸಂಸದೆಯಾಗಿದ್ದಾರೆ. ಆದರೆ ಪಿತಪುರಂನಿಂದ ಮತ್ತೆ ಲೋಕಸಭೆಗೆ ಸ್ಪರ್ಧಿಸಲು ತೀರ್ಮಾನಿಸಿರುವ ಗೀತಾ, ಟಿಕೆಟ್‌ಗಾಗಿ ವೈಎಸ್ಆರ್‌ ಕಾಂಗ್ರೆಸ್‌ಗೆ ಸೇರಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕೆ ಸೇರಿದ್ದು ಅತ್ಯಂತ ಖುಷಿಯಾಗಿದೆ. ಪಕ್ಷದ ಕಲ್ಯಾಣ ಯೋಜನೆಗಳಾದ ನವರತ್ನಾಲು ಮೂಲಕ ವೈ ಎಸ್‌ ಜಗನ್‌ ಅವರು ಜನರಿಗೆ ನ್ಯಾಯವನ್ನು ಒದಗಿಸಬಲ್ಲರು. ವೈಎಸ್‌ಆರ್‌ಪಿಯು ಖಂಡಿತವಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ಹೇಳಿದರು.

ಪಕ್ಷದ ಅಧ್ಯಕ್ಷ ಜಗನ್‌ ಮೋಹನ್‌ ರೆಡ್ಡಿ ಅವರ ಮೇಲಿರುವ ವಿಶ್ವಾಸದಿಂದಲೇ ಪಕ್ಷಕ್ಕೆ ಸೇರಿದ್ದೇನೆ. ಅವರ ನಾಯಕತ್ವದಲ್ಲಿ ನಮಗೆ ನಂಬಿಕೆಯಿದೆ ಎಂದು ಪ್ರಭಾಕರ್‌ ರೆಡ್ಡಿ ತಿಳಿಸಿದ್ದಾರೆ.

2014ಲ್ಲಿ ವೈಎಸ್‌ಆರ್‌ಪಿಯಿಂದಲೇ ಕರ್ನೂಲ್‌ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ಬುಟ್ಟಾ ರೇಣುಕಾ ಅವರು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನೇತೃತ್ವದ ಟಿಡಿಪಿಗೆ ಸೇರ್ಪಡೆಯಾಗಿದ್ದರು. ಟಿಡಿಪಿಯಿಂದ ಕರ್ನೂಲ್‌ ಕ್ಷೇತ್ರಕ್ಕೆ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಮರಳಿ ವೈಎಸ್‌ಆರ್‌ಪಿಗೆ ಬಂದಿರುವುದಾಗಿ ಮೂಲಗಳು ತಿಳಿಸಿವೆ. (ಏಜೆನ್ಸೀಸ್)

Stay connected

278,738FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...