

ಬೆಳಗಾವಿ : ಈಜಲು ಹೋಗಿದ್ದ ನಾಲ್ವರು ಯುವಕರು ಘಟಪ್ರಭಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ.
ಮೃತ ಯುವಕರ ಹೆಸರು ಇನ್ನೂ ತಿಳಿದು ಬಂದಿಲ್ಲ. ಮೃತ ನಾಲ್ವರೂ ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದವರೆಂಬ ಮಾಹಿತಿ ತಿಳಿದು ಬಂದಿದೆ.
ಮೃತ ಯುವಕರು ಘಟಪ್ರಭಾ ಬಾರ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಾರ್ ರಜೆ ಇದ್ದಿದ್ದರಿಂದ ಯುವಕರು ಈಜಲು ಹೋಗಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದ ಕಾರಣ ಯುವಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.