ಚೆನ್ನೈನ ಐಫೋನ್​ ಫ್ಯಾಕ್ಟರಿಯಲ್ಲಿ ವಿವಾಹಿತರಿಗೆ ನೋ ಎಂಟ್ರಿ; ತನಿಖೆಗೆ ಆದೇಶಿಸಿದ ಸರ್ಕಾರ

Foxconn

ಚೆನ್ನೈ: ಪುರುಷರಷ್ಟೇ ಮಹಿಳೆಯರಿಗೆ ಉದ್ಯೋಗಗಳಲ್ಲಿ ಸಮಾನ ಅವಕಾಶ ನೀಡಬೇಕೆಂಬ ಆಗ್ರಹ ಕೇಳಿ ಬರುತ್ತಿರುವ ನಡುವೆಯೇ ಪ್ರತಿಷ್ಠಿತ ಆ್ಯಪಲ್ ಐಫೋನ್ ಗಳನ್ನು ಅಸೆಂಬಲ್ ಮಾಡಿಕೊಡುವ ತೈವಾನ್ ಮೂಲದ ಫಾಕ್ಸ್‌ಕಾನ್ ಕಂಪನಿಯ ಚೆನ್ನೈ ಘಟಕದಲ್ಲಿ ವಿವಾಹಿತ ಮಹಿಳೆಯರಿಗೆ ಉದ್ಯೋಗ ನೀಡಬಾರದೆಂಬ ಆದೇಶ ಹೊರಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.

ವಿವಾಹಿತ ಮಹಿಳೆಯರು ಹೆಚ್ಚಿನ ಕೌಟುಂಬಿಕ ತಾಪತ್ರಯಗಳನ್ನು ಹೊಂದಿರುತ್ತಾರೆ. ಅವರಿಗೆ ಮಗುವಿನ ಜೊತೆಗೆ ಕುಟುಂಬವನ್ನು ನಿಭಾಯಿಸುವ ಹೆಚ್ಚಿನ ಹೊಣೆಗಾರಿಕೆ ಇರುತ್ತದೆ. ಹೀಗಾಗಿ ಅವರು ಹೆಚ್ಚು ರಜೆ ಪಡೆಯುತ್ತಾರೆ ಹೀಗಾಗಿ ವಿವಾಹಿತ ಮಹಿಳೆಯರನ್ನು ಕೆಲಸಕ್ಕೆ ಸೇರಿಸಿಕೊಳ್ಳಬಾರದೆಂದು ಕಂಪನಿ ಆದೇಶ ಹೊರಡಿಸಿದೆ ಎಂಬ ಆರೋಪ ಕೇಳಿ ಬಂದಿದೆ. ಚೆನ್ನೈನ ಶ್ರೀಪೆರಂಬದೂರಿನಲ್ಲಿರುವ ಫಾಕ್ಸ್ ಕಾನ್ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ್ದ ವಿವಾಹಿತ ಮಹಿಳಾ ಉದ್ಯೋಗಿಗಳನ್ನು ರಾಯಿಟರ್ಸ್ ಸಂದರ್ಶಿಸಿ​ ವಿಶೇಷ ವರದಿಯನ್ನು ಪ್ರಕಟಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ರೇಣುಕಸ್ವಾಮಿ ಹತ್ಯೆ ಕೇಸ್​; ನಾನು ದರ್ಶನ್ ಪರ ನಿಲ್ಲುತ್ತೇನೆ ಎಂದ ನಟಿ ಭಾವನಾ

ಈ ಬಗ್ಗೆ ವರದಿ ಪ್ರಕಟವಾಗುತ್ತಿದ್ದಂತೆ ತನಿಖೆಗೆ ಆದೇಶಿಸಿರುವ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು, 1976 ರ ಸಮಾನ ಸಂಭಾವನೆ ಕಾಯ್ದೆಯನ್ನು ಉಲ್ಲೇಖಿಸಿ ಪುರುಷ ಮತ್ತು ಮಹಿಳಾ ಉದ್ಯೋಗಿಗಳನ್ನು ನೇಮಿಸುವಾಗ ಯಾವುದೇ ತಾರತಮ್ಯವನ್ನು ಮಾಡಬಾರದು ಎಂದು ಕಾನೂನು ಸ್ಪಷ್ಟವಾಗಿ ಹೇಳುತ್ತದೆ. ವಿವಾಹಿತ ಮಹಿಳೆಯರನ್ನು ಉದ್ಯೋಗ ನೀಡದಿರುವ ಫಾಕ್ಸ್‌ಕಾನ್‌ನ ನಿರ್ಧಾರವನ್ನು ಪ್ರಶ್ನಿಸಿ ಇಲಾಖೆಯು ಸಮಗ್ರವಾದ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಕಂಪನಿಯು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಫಾಕ್ಸ್‌ಕಾನ್ ಕಂಪನಿಯ ಮುಖ್ಯಸ್ಥಯಂಗ್ ಲಿಯು ಅವರಿಗೆ ಈ ಬಾರಿ ಭಾರತದಲ್ಲಿ ತಮ್ಮ ಕಾರ್ಖಾನೆಗಳನ್ನು ಸ್ಥಾಪಿಸಿ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಕ್ಕಾಗಿ ಪದ್ಮ ಪ್ರಶಸ್ತಿಯನ್ನೂ ನೀಡಿ ಭಾರತ ಸರ್ಕಾರ ಗೌರವಿಸಿದೆ. ಆದರೆ ಅವರದ್ದೇ ಕಂಪನಿಯಲ್ಲಿ ಈ ರೀತಿ ವೈವಾಹಿಕ ಜೀವನದ ಆಧಾರದಲ್ಲಿ ಲಿಂಗ ತಾರತಮ್ಯ ಮಾಡುತ್ತಿದ್ದಾರೆ ಎಂಬ ಆರೋಪ ಭಾರೀ ಚರ್ಚೆಗೆ ಗ್ರಾಸವಾಗಿದೆ.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…