More

    ವಂಚನೆ ಆರೋಪಿ ಬಂಧನ

    ಉಡುಪಿ: ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ.ಸಿ ಅಗಿ ಕೆಲಸ ಮಾಡಿಕೊಂಡಿರುವುದಾಗಿ ಹೇಳಿ ಉಡುಪಿ ಜಿಲ್ಲೆ ಮತ್ತು ಹೊರ ಜಿಲ್ಲೆಗಳಲ್ಲಿ ಸಾರ್ವಜನಿಕರನ್ನು ನಂಬಿಸಿ ಅವರ ಬಳಿ ಹಣ ಮತ್ತು ದಾಖಲಾತಿ ಪಡೆದುಕೊಂಡು ಸಾರ್ವಜನಿಕರಿಗೆ ಮೋಸ ಮಾಡಿರುವ ಆರೋಪದಲ್ಲಿ ಗಣೇಶ್ ನಾಯ್ಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಅ.25ರಂದು ಮಣಿಪಾಲ ಕೆಎಂಸಿ ಅಸ್ಪತ್ರೆಯಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ಮಥಾಯಿಸ್ ಎಂಬುವರ ಬಳಿ ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿಸಿ ಆಗಿರುವುದಾಗಿ ಹೇಳಿ ಉದ್ಯೋಗ ಕೊಡುವುದಾಗಿ ನಂಬಿಸಿ 20,000 ರೂ. ಹಾಗೂ ದಾಖಲೆ ಪತ್ರಗಳನ್ನು ತೆಗೆದುಕೊಂಡಿದ್ದ. ಅದೇ ರೀತಿ ಪರ್ಕಳದ ವನಿತಾ ಎಂಬುವರಿಂದ ಹಣ ಪಡೆದು ನಕಲಿ ನೇಮಕಾತಿ ಪತ್ರ ನೀಡಿ, ಉದ್ಯೋಗ ಕೊಡಿಸದೆ ಮೋಸ ಮಾಡಿದ್ದ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ ಅವರು ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸಕ್ತಿವೇಲು ಮತ್ತು ವಾಸಪ್ಪ ನಾಯ್ಕ ಹಾಗೂ ಸಿಬ್ಬಂದಿಯ ವಿಶೇಷ ತಂಡ ರಚಿಸಿ, ರೈಲ್ವೆ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ್ ಗಾಂವ್ಕರ್ ಹಾಗೂ ಸಿಬ್ಬಂದಿ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts