More

    70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!

    ತುಮಕೂರು: ಮಕ್ಕಳಿಲ್ಲದ ಸತಿ-ಪತಿಯರನ್ನೇ ಟಾರ್ಗೆಟ್​ ಮಾಡಿ ಮೋಸ ಮಾಡುತ್ತಿದ್ದ ಖತರ್​​ನಾಕ್​ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಮೋಸ ಹೋದವರು ಹಣ ಕಳೆದುಕೊಂಡಿದ್ದಷ್ಟೇ ಅಲ್ಲ, ಕೆಲವರು ಆರೋಗ್ಯ ಕೂಡ ಕಳೆದುಕೊಂಡು ಇನ್ನೂ ಚೇತರಿಸಿಕೊಳ್ಳಲಾಗದೆ ಸಂಕಟ ಪಡುತ್ತಿದ್ದಾರೆ. ವೈದ್ಯರೆಂದು ಹೇಳಿಕೊಂಡು ಹೀಗೆ ಮೋಸ ಮಾಡುತ್ತಿದ್ದ ಖತರ್​​ನಾಕ್ ಜೋಡಿಯನ್ನು ತುಮಕೂರು ಜಿಲ್ಲೆ ನೊಣವಿನಕೆರೆ ಪೊಲೀಸರು ಬಂಧಿಸಿದ್ದಾರೆ. ವಾಣಿ ಮತ್ತು ಮಂಜುನಾಥ ಬಂಧಿತ ಆರೋಪಿಗಳು.

    ಕಾರಿಗೆ ವೈದ್ಯರ ಲೋಗೋ ಹಾಕಿಕೊಂಡು, ಸ್ಟೆತೋಸ್ಕೋಪ್​ ಹಿಡಿದುಕೊಂಡು ಡಾಕ್ಟರ್​ ಥರ ಪೋಸ್​ ಕೊಡುತ್ತಿದ್ದ ವಾಣಿ ಮಕ್ಕಳಿಲ್ಲದ ದಂಪತಿಯನ್ನು ಸಂಪರ್ಕಿಸಿ, ತಾವು ಕೊಟ್ಟ ಮದ್ದು ಪಡೆದು ಹೇಳಿದಂತೆಯೇ ಮಾಡಿದರೆ ಮಕ್ಕಳಾಗುತ್ತದೆ ಎಂದು ಹಣ ಪಡೆದು ವಂಚಿಸಿದ್ದಾರೆ. ಒಬ್ಬೊಬ್ಬರಿಗೆ 2ರಿಂದ 5 ಲಕ್ಷ ರೂ. ವರೆಗಿನ ಇಂಜೆಕ್ಷನ್, ಪೌಡರ್ ಇತ್ಯಾದಿಯನ್ನು ಪ್ಯಾಕೇಜ್​ ಮೇಲೆ ಕೊಡುತ್ತಿದ್ದರು. ಬಳಿಕ ಒಂದಷ್ಟು ಸೂಚನೆ ಕೊಟ್ಟು ಯಾವುದೇ ಸ್ಕ್ಯಾನ್ ಮಾಡಿಸಬಾರದು ಎಂದು ತಾಕೀತು ಮಾಡುತ್ತಾರೆ. ಹೀಗೆ ಇವರಿಂದ ಮೋಸ ಹೋಗಿ ಹಣ-ಆರೋಗ್ಯ ಎರಡೂ ಕಳೆದುಕೊಂಡವರು ಕೊಟ್ಟ ದೂರಿನ ಮೇರೆಗೆ ಪೊಲೀಸರು ಇವರನ್ನು ಬಂಧಿಸಿದ್ದಾರೆ.

    ಇದನ್ನೂ ಓದಿ: ವೇದಿಕೆಯಲ್ಲಿ ಪತ್ನಿಯನ್ನು ಕೂರಿಸಿಕೊಂಡ ರೇಣುಕಾಚಾರ್ಯ; ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ

    ಆರು ತಿಂಗಳಿನಿಂದ ಈ ಆರೋಪಿಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಅನುಮಾನ ಬಂದ ದಂಪತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ತಿಪಟೂರು ತಾಲೂಕಿನ‌‌ ಬೆಳಗರಹಳ್ಳಿಯ ಒಂದೇ ಗ್ರಾಮದ ಐದಾರು ಮಹಿಳೆಯರಿಗೆ ವಂಚನೆ ಮಾಡಿರುವ ಇವರು ಪ್ರತಿಯೊಬ್ಬರಿಂದಲೂ 2-5 ಲಕ್ಷ ಪಡೆದಿದ್ದರು.

    70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!

     

    ಅದರಲ್ಲೂ ಈಕೆಯಿಂದ ಇಂಜೆಕ್ಷನ್ ಪಡೆದ ಬಳಿಕ‌ ಮಹಿಳೆಯೊಬ್ಬರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಇವರಿಂದ ಔಷಧ ಎನ್ನಲಾದ ವಸ್ತು ಪಡೆದ ಎರಡೇ ತಿಂಗಳಲ್ಲಿ ಮಹಿಳೆಯರ ದೇಹದಲ್ಲಿ ಬದಲಾವಣೆ ಕಾಣಿಸುತ್ತಿದ್ದು, ಇಂಜೆಕ್ಷನ್ ಪಡೆದ ಕೆಲ ತಿಂಗಳಲ್ಲಿ ಮಹಿಳೆಯೊಬ್ಬರು ಸಾವು-ಬದುಕಿನ ನಡುವೆ ಹೋರಾಡುವಂತಾಗಿದೆ.
    ಕಿಡ್ನಿ ಸಮಸ್ಯೆ, ಮೆದುಳು ಸಮಸ್ಯೆ ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿರುವ ಈ ಮಹಿಳೆ ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ 10 ಲಕ್ಷ ರೂಪಾಯಿಗೂ ಅಧಿಕ ಖರ್ಚು ಮಾಡಿದ್ದರೂ ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ವೈದ್ಯೆಯನ್ನು ಸಂಪರ್ಕಿಸಿದಾಗ ಸಬೂಬು ಹೇಳಿ ತಪ್ಪಿಸಿಕೊಂಡಿದ್ದರು. ಇವರು ಕೂಡ ಪೊಲೀಸರಿಗೆ ದೂರು ನೀಡಿದ್ದರು.

    ಇದನ್ನೂ ಓದಿ: ಅಪ್ಪು ಜನ್ಮದಿನದಂದು ‘ಜೇಮ್ಸ್​’ ಉತ್ಸವ; 31 ಕಟೌಟ್ಸ್​, ಹೆಲಿಕಾಪ್ಟರ್​​ನಲ್ಲಿ ಹೂಮಳೆ; ಇನ್ನೇನಿರಲಿದೆ ಅಲ್ಲಿ?

    70ಕ್ಕೂ ಹೆಚ್ಚು ದಂಪತಿಗಳಿಗೆ ಮೋಸ; ಖತರ್​ನಾಕ್​ ಗಂಡ-ಹೆಂಡ್ತಿಯ ಬಂಧನ!
    ಬಂಧಿತ ಆರೋಪಿಗಳು

    ದೂರುಗಳ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರು ಆರೋಪಿಗಳನ್ನು ಸಕಲೇಶಪುರದಲ್ಲಿ ಪತ್ತೆ ಮಾಡಿ ಬಂಧಿಸಿದ್ದಾರೆ. ಆರೋಪಿಗಳಿಂದ 10 ಲಕ್ಷ ರೂ. ನಗದು ಹಾಗೂ 250 ಗ್ರಾಂ ಚಿನ್ನಾಭರಣ ಕೂಡ ವಶಪಡಿಸಿಕೊಳ್ಳಲಾಗಿದೆ. ಡಾಕ್ಟರ್ ಲೋಗೋ ಹಾಕಿಕೊಂಡು ‌ವಂಚಿಸುತ್ತಿದ್ದ ಮಹೀಂದ್ರಾ ಕಾರನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ತಿಪಟೂರು ತಾಲೂಕೊಂದರಲ್ಲೇ ಬರೋಬ್ಬರಿ 70 ದಂಪತಿಗಳಿಗೆ ಇದೇ ರೀತಿ ವಂಚಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಮೋಸ ಹೋದ ದಂಪತಿಗಳು ಮರ್ಯಾದೆಗೆ ಅಂಜಿ ದೂರು ಕೊಡಲು ಹಿಂದೇಟು ಹಾಕಿರುವುದು ಕಂಡುಬಂದಿದೆ. ಪೊಲೀಸರು ತನಿಖೆ ಮುಂದುವರಿಸಿದ್ದು, ಮತ್ತಷ್ಟು ವಿಷಯ ಹೊರಬರುವ ಲಕ್ಷಣಗಳಿವೆ.

    ಸಬ್​ ರಿಜಿಸ್ಟ್ರಾರ್​ ಕಚೇರಿ ಇನ್ಮುಂದೆ ಮತ್ತಷ್ಟು ‘ಓಪನ್’; ಮಹಿಳಾ ಸಿಬ್ಬಂದಿಗೆ ಸಂಕಷ್ಟ!?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts