

ಬೆಳ್ತಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ವತಿಯಿಂದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಸಹಯೋಗದೊಂದಿಗೆ 20ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಹಾಗೂ ಆರೋಗ್ಯ ಶಿಬಿರವು ಜೂ.9ರಂದು ಬೆಳಗ್ಗೆ 11ಕ್ಕೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದಲ್ಲಿ ನಡೆಯಲಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮ ಪ್ರಸಾದ್ ಅಜಿಲ ಅಧ್ಯಕ್ಷತೆ ವಹಿಸಲಿರುವರು. ಚಲನಚಿತ್ರ ನಟ, ಸಿರಿ ಬ್ರಾಂಡ್ ರಾಯಭಾರಿ ರಮೇಶ್ ಅರವಿಂದ್ ಉಚಿತ ಪುಸ್ತಕ ವಿತರಣೆಗೆ ಚಾಲನೆ ನೀಡಲಿದ್ದಾರೆ.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಎಂಎಲ್‌ಸಿಗಳಾದ ಕೆ.ಹರೀಶ್ ಕುಮಾರ್, ಪ್ರತಾಪ ಸಿಂಹ ನಾಯಕ್, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ನಡಕ್ಕರ, ಶ್ರೀ ಉಮಾಮಹೇಶ್ವರ ದೇವಸ್ಥಾನ ಮರೋಡಿ ಇದರ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಗ್ರಾಪಂ ಅಧ್ಯಕ್ಷೆ ಸರಸ್ವತಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 9ಕ್ಕೆ ಆರೋಗ್ಯ ಶಿಬಿರ ನಡೆಯಲಿದ್ದು ಡಾ.ಪ್ರದೀಪ್ ನಾವರ ಶಿಬಿರ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಧ್ಯಕ್ಷತೆ ವಹಿಸಲಿದ್ದು ಇತರ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲ ಹಾಗೂ ಸಿರಿ ಸಂಸ್ಥೆಯ ಎಂ.ಡಿ ಕೆ.ಎನ್.ಜನಾರ್ದನ್ ತಿಳಿಸಿದ್ದಾರೆ.