More

    ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕ‌ಕಾಲಕ್ಕೆ ಚಾಲನೆ ನೀಡಲು ಸಿಎಂ ಸೂಚನೆ

    -ಶಾಸಕರು-ಜಿಲ್ಲಾ ಮಂತ್ರಿಗಳಿಗೆ ಮುಖ್ಯಮಂತ್ರಿ ಸೂಚನೆ

    -ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ಶಕ್ತಿ

    ಬೆಂಗಳೂರು: ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಈ ಕುರಿತು ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ.

    ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ.

    ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ, ಅಗತ್ಯ ಕ್ರಮಕ್ಕೆ ಸೂಚನೆ

    ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಸೂಚನೆ ನೀಡಿದ್ದಾರೆ.

     ಇದನ್ನೂ ಓದಿ: ಅಯ್ಯೋ ಹುಡುಗ ಕಪ್ಪಗಿದ್ದಾನೆ..ನನಗೆ ಮದುವೆ ಬೇಡಾ; ಮಂಟಪದಿಂದ ಹೊರ ನಡೆದ ವಧು

    ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು. ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ನಾನು (ಮುಖ್ಯಮಂತ್ರಿಗಳು) ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.

    ಅಸುರನ್ ಸಿನಿಮಾದ ಸಹಾಯಕ ನಿರ್ದೇಶಕ ಶರಣ್​ ರಾಜ್ ಅಪಘಾತದಲ್ಲಿ ನಿಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts