ಜಡ್ಕಲ್‌ನಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

gan (2)
Published on

ಕುಂದಾಪುರ: ರೋಟರಿ ಕ್ಲಬ್ ಗಂಗೊಳ್ಳಿ, ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘ, ಹಾಲು ಉತ್ಪಾದಕರ ಸಹಕಾರಿ ಸಂಘ ಜಡ್ಕಲ್, ಮಾಹೆ ಮಣಿಪಾಲ ವಿವಿಧೋದ್ದೇಶ ಸಹಕಾರಿ ಸಂಘ ಜಡ್ಕಲ್ ಸಮುದಾಯ ವೈದ್ಯಕೀಯ ವಿಭಾಗ ಸಹಭಾಗಿತ್ವದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಜಡ್ಕಲ್ ಬೀಸಿನಪಾರೆ ಸಹಕಾರ ಸಂಘದ ಕಟ್ಟಡದಲ್ಲಿ ನಡೆಯಿತು.

ಜಡ್ಕಲ್ ಚರ್ಚಿನ ಧರ್ಮಗುರು ಜೋಸಫ್ ಶಿಬಿರ ಉದ್ಘಾಟಿಸಿದರು. ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಕೆಎಂಸಿ ಮಣಿಪಾಲದ ತಜ್ಞವೈದ್ಯೆ ಡಾ.ಸಾಚಿ, ಜಡ್ಕಲ್ ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜೋಯ್, ಜಡ್ಕಲ್ ವಿವಿಧೋದ್ದೇಶ ಸಹಕಾರಿ ಸಂಘ ಸಹಕಾರಿ ಸಂಘದ ಅಧ್ಯಕ್ಷ ಸೈಮನ್ ಜೋಸೆಫ್, ಗಂಗೊಳ್ಳಿ ರೋಟರಿ ಕ್ಲಬ್‌ನ ಕಮ್ಯನಿಟಿ ಚೇರ್ಮನ್ ಕೆ.ರಾಮನಾಥ್ ನಾಯಕ್ ಹಾಗೂ ಮನೋಜ್ ಮೊದಲಾದರವರು ಉಪಸ್ಥಿತರಿದ್ದರು.

ಕೃಷ್ಣ ಪೂಜಾರಿ ಸ್ವಾಗತಿಸಿದರು. ಚಂದ್ರಕಲಾ ತಾಂಡೇಲ ಕಾರ್ಯಕ್ರಮ ನಿರ್ವಹಿಸಿದರು. ಸೈನಾ ಸೇಟ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net