ಬೆಟಗೇರಿ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗೋಕಾಕ ಲಯನ್ಸ್ ಕ್ಲಬ್, ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ, ಪಿಕೆಪಿಎಸ್, ಗ್ರಾಪಂ, ಗಜಾನನ ಯುವಕ ಮಂಡಳ, ರಕ್ಷಣಾ ವೇದಿಕೆ, ಗೋಕಾಕ ತಾಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಸಂಯುಕ್ತ ಆಶ್ರಯದಲ್ಲಿ ಜ.5ರಂದು ಬೆಳಗ್ಗೆ 10 ಗಂಟೆಗೆ ಉಚಿತ ಕಣ್ಣಿನ ಪೊರೆ ತಪಾಸಣೆ ಬಹತ್ ಶಿಬಿರ ಉದ್ಘಾಟನೆ ಜರುಗಲಿದೆ.
ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಯಲ್ಲಾಲಿಂಗ ದೇಯಣ್ಣವರ, ಪಿಕೆಪಿಎಸ್ ಅಧ್ಯಕ್ಷ ಬಸವಂತ ಕೋಣಿ, ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಚಂದರಗಿ, ಬಸವರಾಜ ದೇಯಣ್ಣವರ, ಈರಣ್ಣ ಬಳಿಗಾರ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಎಸ್. ಕೊಪ್ಪದ, ಪಿಎಚ್‌ಸಿ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ, ಗೋಕಾಕ ಲಯನ್ಸ್ ಕ್ಲಬ್ ಅಧ್ಯಕ್ಷ ಅಶೋಕ ಲಗಮಪ್ಪಗೋಳ, ಸುರೇಶ ಶಿಂದಿಹಟ್ಟಿ, ಪ್ರಶಾಂತ ಅಂಕದವರ ಆಗಮಿಸಲಿದ್ದಾರೆೆ.