ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಉಚಿತ ತರಬೇತಿ

computer vitarane
ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
Published on

ಹೆಬ್ರಿ: ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯ ನಿರ್ದೇಶಕ ಡಾ.ಗಿರಿಧರ್ ಸಾಲ್ಯಾನ್ ವಾತನಾಡಿ, ಕೋರ್ಸ್ ಕಲಿತ ವಿದ್ಯಾರ್ಥಿಗಳ ಸರ್ಟಿಫಿಕೇಟ್‌ಗೆ ಅಂತಾರಾಷ್ಟ್ರೀಯ ಮಟ್ಟದ ಮೌಲ್ಯವಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಪ್ರಾಂಶುಪಾಲ ಡಾ.ವಿದ್ಯಾಧರ್ ಹೆಗ್ಡೆ ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತದೆ ಎಂದರು. ಇತಿಹಾಸ ವಿಭಾಗದ ಮುಖ್ಯಸ್ಥ ಅರುಣಾಚಲ ಕೆ.ಎಸ್. ಉಪಸ್ಥಿತರಿದ್ದರು. ಕಂಪ್ಯೂಟರ್ ತರಬೇತಿ ಶಿಕ್ಷಕಿ ವಿಂದ್ಯಾ ನಿರೂಪಿಸಿದರು. ಅರ್ಥಶಾಸ ವಿಭಾಗ ಮುಖ್ಯಸ್ಥ ಪದ್ಮನಾಭ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net