

ಹೆಬ್ರಿ: ಉಡುಪಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಕಳ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ, ಚಾರ ಗ್ರಾಪಂ, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ, ಮಣಿಪಾಲ ದಂತ ವೈದ್ಯಕೀಯ ವಿದ್ಯಾಲಯ ಸಮುದಾಯ ಚಿಕಿತ್ಸಾ ವಿಭಾಗ ಆಶ್ರಯದಲ್ಲಿ ಬಾಯಿ ಮತ್ತು ದಂತ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಚಾರ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆಯಿತು.
ಚಾರ ಗ್ರಾಪಂ ಅಧ್ಯಕ್ಷ ದಿನೇಶ್ ಶೆಟ್ಟಿ ಹುತ್ತುರ್ಕೆ ಮಾತನಾಡಿ, ಸಾರ್ವಜನಿಕರು ಅಗತ್ಯವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು. ನೋಡಲ್ ಅಧಿಕಾರಿ ಡಾ.ಸಂತೋಷ್ ಕುಮಾರ್ ಬೈಲೂರು, ಚಾರ ಗ್ರಾಪಂ ಉಪಾಧ್ಯಕ್ಷ ಕೃಷ್ಣ ನಾಯ್ಕ, ಡಾ.ರಮಾಮಣಿ, ಡಾ.ಯತಿಕಾ, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ, ಮಣಿಪಾಲ ಕೆಎಂಸಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.