ವ್ಯಾಪಾರಸ್ಥರಿಗೆ ಬಟ್ಟೆ ಬ್ಯಾಗ್ ಉಚಿತ ವಿತರಣೆ

blank

ಮೈಸೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರಪಾಲಿಕೆ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಾಗೂ ಜೀವಧಾರ ರಕ್ತ ನಿಧಿ ಕೇಂದ್ರದಿಂದ ಶುಕ್ರವಾರ ಪ್ಲಾಸ್ಟಿಕ್ ಬ್ಯಾಕ್ ಬಿಡಿ ಬಟ್ಟೆ ಬ್ಯಾಗ್ ಹಿಡಿ ಎಂಬ ಜಾಗೃತಿ ಕಾರ್ಯಕ್ರಮದಲ್ಲಿ ಅಯೋಜಿಸಲಾಗಿತ್ತು. ಗ್ರಾಹಕರಿಗೆ ಹಾಗೂ ವ್ಯಾಪಾರಸ್ಥರಿಗೆ ಉಚಿತ ಬಟ್ಟೆ ಬ್ಯಾಗ್ ವಿತರಿಸಿ ಪ್ಲಾಸ್ಟಿಕ್‌ನಿಂದ ಆಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಲು ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳೆಸಬೇಕು. ಪ್ಲಾಸ್ಟಿಕ್ ಮುಕ್ತ ಭಾರತ ಪ್ರತಿಯೊಬ್ಬರ ಕರ್ತವ್ಯವಾಗಲಿ ಎಂದು ಕೋರಿದರು.
ಅಂಗಡಿ, ಮಾರುಕಟ್ಟೆಗೆ ತೆರಳುವಾಗ ಪ್ಲಾಸ್ಟಿಕ್ ಕವರ್ ಬದಲಾಗಿ ಪರಿಸರಸ್ನೇಹಿ ವಸ್ತುಗಳಿಂದ, ಬಟ್ಟೆಗಳಿಂದ ಮಾಡಿದ ಚೀಲಗಳನ್ನು ಬಳಸಬೇಕು. ಕಸದ ನಿರ್ವಹಣೆ ಮನೆಯಿಂದಲೇ ಆರಂಭವಾಗಬೇಕು. ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ವಿಲೇವಾರಿ ಮೂಲಕ ಮಾಲಿನ್ಯ ತಡೆಯಬೇಕು. ನಾವು ನೆಟ್ಟ ಗಿಡವನ್ನು ಪೋಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎನ್ನುವುದು ಮರೆಯಬಾರದು. ಹತ್ತಿರದ ಸ್ಥಳಗಳಲ್ಲಿ ವಾಹನ ಬಿಟ್ಟು ನಡೆದುಕೊಂಡು ಹೋಗುವುದು ಹಾಗೂ ಬೈಸಿಕಲ್ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು
ನಗರಪಾಲಿಕೆ ಮಾಜಿ ಸದಸ್ಯೆ ಪ್ರಮೀಳಾ ಭರತ್ ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಧಕ್ಕೆಯಾಗುತ್ತಿದೆ. ವಿದ್ಯಾವಂತರೇ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪರಿಸರದ ಮಹತ್ವ ತಿಳಿದಿದ್ದರೂ ಅನಕ್ಷರಸ್ಥರ ರೀತಿಯಲ್ಲಿ ಪರಿಸರವನ್ನು ನಾಶ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸರವನ್ನು ಕಾಪಾಡಿ, ಅದನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕು ಎಂದರು.
ಗಿಡ ಬೆಳೆಸಿ ನಾಡು ಬೆಳೆಸಿ, ಘೋಷಣೆ ವಾಸ್ತವದಲ್ಲಿ ಜಾರಿಯಾಗಬೇಕು. ನಾವು ಇರುವ ಜಾಗದ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸುತ್ತಮುತ್ತ ಇರುವ ಜಾಗದಲ್ಲಿ ಹಸಿರು ಇರುವ ರೀತಿಯಲ್ಲಿ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಬೇಕು ಎಂದು ಹೇಳಿದರು.
ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ರಾಜ್ಯ ಸಂಚಾಲಕ ರವಿಶಂಕರ್, ಮುಖಂಡರಾದ ಎಸ್.ಎನ್.ರಾಜೇಶ್, ಚರಣ್, ನಗರಪಾಲಿಕೆ ವಲಯ ಕಚೇರಿ 06ರ ಪರಿಸರ ಇಂಜಿನಿಯರ್ ಮೈತ್ರಿ, ಆರೋಗ್ಯ ನಿರೀಕ್ಷಕ ಎಸ್.ಮಂಜುಕುಮಾರ್ ಇತರರು ಇದ್ದರು.

Share This Article

ಸ್ನಾನದ ನಂತರವೂ ನಿಮ್ಮ ದೇಹವು ಕೆಟ್ಟ ವಾಸನೆಯನ್ನು ಬೀರುತ್ತದೆಯೇ? ಹೀಗೆ ಮಾಡಿ ನೋಡಿ…. life style

life style: ಕೆಲವರಿಗೆ ದೇಹದಿಂದ ವಾಸನೆ ಬರುವುದನ್ನು ನೀವು ಗಮನಿಸಿರಬಹುದು. ಅದು ಚಳಿಯಾಗಿರಬಹುದು, ಮಳೆಯಾಗಿರಬಹುದು, ಸಣ್ಣ…

ವಕ್ರ ದಂತ ಸಮಸ್ಯೆಗೆ ಸೂಕ್ತ ಪರಿಹಾರ ಅಲೈನರ್

ಹಲ್ಲು ಅಡ್ಡಾದಿಡ್ಡಿ ಇದ್ದರೆ ಅಂಥವರು ಮುಜುಗರದಿಂದ ಮನಬಿಚ್ಚಿ ನಗದಿರುವುದೇ ಹೆಚ್ಚು. ಆದರೆ ಈಗ ಅಷ್ಟಕ್ಕೆಲ್ಲ ಚಿಂತೆ…