ಹುಬ್ಬಳ್ಳಿ : ಇಲ್ಲಿನ ವಿದ್ಯಾನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ಜೂ. 8 ರಂದು ಬೆಳಗ್ಗೆ 9 ಗಂಟೆಗೆ ಅಸ್ತಮಾ (ದಮ್ಮು), ಕೆಮ್ಮು, ಅಲರ್ಜಿ ರೋಗಗಳಿಗೆ ಉಚಿತ ಮಂತ್ರೌ ಔಷಧಿ ವಿತರಿಸಲಾಗುವುದು.
ಶ್ರೀ ಜಗದ್ಗುರು ರಂಭಾಪುರೀಶ ಸಾಂಸ್ಕೃತಿಕ ಸೇವಾ ಸಂಘ ಹಾಗೂ ಗೋಕುಲ ರಸ್ತೆ ಗಾಂಧಿನಗರದ ಶ್ರೀ ಧನ್ವಂತರಿ ಸೇವಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಈ ಶಿಬಿರ ಆಯೋಜಿಸಲಾಗಿದೆ.
ಅಮ್ಮಿನಬಾವಿ ಪಂಚಗ್ರಹ ಹಿರೇಮಠದ ಶ್ರೀ ಶಾಂತಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸುವರು.
ಶ್ರೀ ಸಿದ್ಧಾರೂಢ ಸ್ವಾಮೀಜಿ ಮಠ ಟ್ರಸ್ಟ್ ಕಮೀಟಿ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟರ ಅತಿಥಿಯಾಗಿದ್ದು, ಶ್ರೀ ಜಗದ್ಗುರು ರಂಭಾಪುರೀಶ ಸಾಂಸ್ಕೃತಿಕ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಹಿರೇಗೌಡರ ಅಧ್ಯಕ್ಷತೆ ವಹಿಸುವರು. ಶ್ರೀ ಧನ್ವಂತರಿ ಸೇವಾ ಸಂಸ್ಥೆಯ ವೈದ್ಯ ಡಾ. ಸುರೇಶ ಮೆಣಸಗಿ ಉಚಿತ ಔಷಧಿ ವಿತರಿಸುವರು.