More

    ಮನ್ಸ ಸಮುದಾಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ: ಡಾ.ಎಂ.ಮೋಹನ ಆಳ್ವ ಹೇಳಿಕೆ

    ಮೂಡುಬಿದಿರೆ: ಸಮಾನ ಚಿಂತನೆ, ಶೈಕ್ಷಣಿಕ, ಸಾಂಸ್ಕೃತಿಕ ಚೈತನ್ಯ ಹೊಂದಿದ್ದ ದಿ. ಡೀಕಯ್ಯ ಅವರ ವಿಚಾರಗಳನ್ನು ಮುಂದಿಟ್ಟುಕೊಂಡು ನಾವು ಸಾಗಬೇಕಾಗಿದೆ. ಡೀಕಯ್ಯ ಅವರ ಹೆಸರಿನಲ್ಲಿ ಸಮಿತಿ ರಚಿಸಿ ಸಮುದಾಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಕೊಡಿಸಲು ನಾವು ಮುಂದಾಗಬೇಕು. ಆಳ್ವಾಸ್ ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆಯಲ್ಲಿ ಮನ್ಸ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಬದ್ಧ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.

    ದಲಿತ ಚಳವಳಿಯ ನೇತಾರ ವಿ.ಡೀಕಯ್ಯ ಅವರಿಗೆ ತುಲುನಾಡ್ ಮನ್ಸ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ಸ್ವರ್ಣ ಮಂದಿರದಲ್ಲಿ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಡೀಕಯ್ಯ ಅವರು ತನ್ನ ಸಮುದಾಯದ ಶೋಷಿತರಿಗೆ ಮಾತ್ರವಲ್ಲದೇ ಇತರ ಸಮುದಾಯವರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಅಪ್ರತಿಮ ನಾಯಕ ಎಂದರು.

    ಸಂಘದ ಅಧ್ಯಕ್ಷ ವೆಂಕಣ್ಣ ಕೊಯ್ಯೂರು ಅಧ್ಯಕ್ಷತೆ ವಹಿಸಿದ್ದರು. ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಸಮಾಜಸೇವಕಿ ರೀಟಾ ನೊರೊನ್ಹ, ಬಿ.ಎಸ್.ಪಿ. ದ.ಕ. ಜಿಲ್ಲಾ ಅಧ್ಯಕ್ಷ ದಾಸಪ್ಪ ಎಡಪದವು, ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಹನೀಫ್, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಮತ್ತಾಡಿ, ಕಟೀಲು ಪಿಯು ಕಾಲೇಜಿನ ಉಪಪ್ರಾಂಶುಪಾಲ ಸೋಮಪ್ಪ ಅಲಂಗಾರು, ಸುಂಕದಕಟ್ಟೆ ಶ್ರೀನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಶಾಲಿನಿ ಆರ್.ಬೋಧಿ, ಸಿ.ಪಿ.ಐ.ಎಂ ರಾಜ್ಯ ಕಾರ್ಯದರ್ಶಿ ಯಾದವ ಶೆಟ್ಟಿ, ಮುತ್ತೂರು ಗ್ರಾಪಂ ಸದಸ್ಯೆ ವನಿತಾ ಗೋಪಾಲ್, ರಂಗ ನಿರ್ದೇಶಕ ಕೃಷ್ಣಪ್ಪ ಬಂಬಿಲ, ಸತೀಶ್ ಕಕ್ಕೆಪದವು, ರಮೇಶ್ ಬೋಧಿ ಉಪಸ್ಥಿತರಿದ್ದರು.

    ಸಂಘದ ಗೌರವ ಸಲಹೆಗಾರ ಅಚ್ಯುತ ಸಂಪಿಗೆ ಪ್ರಸ್ತಾವನೆಗೈದರು. ರಾಜೀವ್ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts