More

    ಆಳ್ವಾಸ್‌ನಿಂದ ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ

    ಶೃಂಗೇರಿ: ಮೂಡುಬಿದಿರೆ ಆಳ್ವಾಸ್ ಎಜುಕೇಷನ್ ಟ್ರಸ್ಟ್ ಮತ್ತು ಶ್ರೀ ಶಾರದಾ ಎಜುಕೇಷನ್ ಟ್ರಸ್ಟ್ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದು ಶಾರದಾ ಎಜುಕೇಷನ್ ಟ್ರಸ್ಟ್ ವೇಣುಮಾಧವ ನಾಯಕ್ ಹೇಳಿದರು.

    6ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಸತಿ, ಸಮವಸ, ಪುಸ್ತಕ ಸಹಿತ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕಾಗಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದ್ದು, ಪಟ್ಟಣದ ಜ್ಞಾನಭಾರತಿ ಶಿಕ್ಷಣ ಸಂಸ್ಥೆಯಲ್ಲಿ ಮಾ.3ರಂದು ಪರೀಕ್ಷೆ ನಡೆಯಲಿದೆ. ೆ.25ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
    ಪರೀಕ್ಷೆಯಲ್ಲಿ ಪಠ್ಯ ವಿಷಯ ಒಳಗೊಂಡಂತೆ 10 ಅಂಕದ ಸಾಮಾನ್ಯ ಜ್ಞಾನದ ಪ್ರಶ್ನೆಗಳಿರುತ್ತವೆ. 6 ಮತ್ತು 7ನೇ ತರಗತಿಗೆ 120 ಹಾಗೂ 8 ಮತ್ತು 9 ತರಗತಿ ವಿದ್ಯಾರ್ಥಿಗಳಿಗೆ 150 ಅಂಕಗಳಿಗೆ ಪರೀಕ್ಷೆ ಇರುತ್ತದೆ. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶ ನೀಡಲಾಗುತ್ತದೆ ಎಂದರು.
    ಆಳ್ವಾಸ್ ಸಂಸ್ಥೆ ಪ್ರೌಢಶಾಲಾ ಮುಖ್ಯಶಿಕ್ಷಕ ಶ್ರೀನಿ ಮಾತನಾಡಿ, ಕನ್ನಡ ಮಾಧ್ಯಮದವರಿಗೆ ಪ್ರೋತ್ಸಾಹ ನೀಡಬೇಕು ಎಂಬುದು ನಮ್ಮ ಸಂಸ್ಥೆಯ ಆಶಯ. ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯಬಹುದು. ಪ್ರವೇಶ ಪಡೆದ ವಿದ್ಯಾರ್ಥಿಗಳು ಯಾವ ವಿಭಾಗದಲ್ಲಿ ಆಸಕ್ತಿ ಇದ್ದರೂ ಅದರಲ್ಲಿ ಪ್ರೋತ್ಸಾಹ ನೀಡಲಾಗುತ್ತದೆ. ಕ್ರೀಡೆ, ಸಾಂಸ್ಕೃತಿಕ ವಿಭಾಗದಲ್ಲಿ ಆಸಕ್ತಿ ಇದ್ದಲ್ಲಿ ಪ್ರತಿಭೆ ಹೊರಹೊಮ್ಮಲು ಅವಕಾಶ ನೀಡಲಾಗುತ್ತದೆ. ಅರ್ಜಿಗಳನ್ನು ವೇಣುಮಾಧವ ನಾಯಕ್ (9448025827) ಸಂಪರ್ಕಿಸಬಹುದು ಎಂದರು.
    ಶಾರದಾ ಎಜುಕೇಷನ್ ಟ್ರಸ್ಟ್‌ನ ಋಷ್ಯಶೃಂಗ ಹೆಗ್ಡೆ, ಇಂಜಿತ್, ಪ್ರಜ್ಞಾ ಇಂಜಿತ್, ಆಳ್ವಾಸ್ ಸಂಸ್ಥೆಯ ಪನ್ನಗ ಶರ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts