More

    ಸರ್ಕಾರಿದಂದ ಮೊತ್ತೊಂದು ಕೊಡುಗೆ;ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರು

    ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್, ನೀರಿನ ಸೌಲಭ್ಯ ಒದಗಿಸಲು ಸರ್ಕಾರ ಆದೇಶಿಸಿದೆ.

    ಗೃಹ ಜ್ಯೋತಿ ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲೇ ಶಾಲೆ, ಕಾಲೇಜುಗಳಿಗೂ ಉಚಿತ ವಿದ್ಯುತ್, ನೀರು ಒದಗಿಸಲು ನಿರ್ಧರಿಸಿದೆ.

    ಈ ಹಿನ್ನೆಲೆಯಲ್ಲಿ 2023-24ನೇ ಆರ್ಥಿಕ ಸಾಲಿನ ಅಂತ್ಯದವರೆಗೆ ಬಳಕೆ ಮಾಡಲಾದ/ಮಾಡಲಾಗುವ ವಿದ್ಯುತ್ ಮತ್ತು ನೀರಿನ ಶುಲ್ಕ ಪಾವತಿಗೆ ಅಗತ್ಯವಿರುವ ಜಿಲ್ಲಾವಾರು ಅನುದಾನದ ವಿವರಗಳ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಸರ್ಕಾರ ಸೂಚಿಸಿದೆ.

    ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಎಲ್ಲ ಶಾಲೆಗಳಿಂದ ಮಾಹಿತಿ ಕೇಳಿದ್ದು, ಇನ್ನು 8588 ಶಾಲೆಗಳು ಮಾಹಿತಿಯನ್ನೇ ನೀಡಿಲ್ಲ. 38473 ಶಾಲೆಗಳು ಮಾಹಿತಿ ಸಲ್ಲಿಸಿವೆ. ಶಾಲೆಗಳ ಮಾಹಿತಿಯನ್ನು ಇಂದೀಕರಿಸದೇ ಇರುವುದರಿಂದ 8588 ಶಾಲೆಗಳು ಯೋಜನೆಯಿಂದ ಹೊರಗುಳಿಯುತ್ತವೆ. ಹಾಗಾಗಿ ಮತ್ತೊಮ್ಮೆ ಶಾಲೆಗಳ ಮಾಹಿತಿಯನ್ನು ಗೂಗಲ್ ಸ್ಪ್ರೆಡ್ ಶೀಟ್‌ನಲ್ಲಿ ಅಪ್‌ಡೇಟ್ ಮಾಡಲು ಗಡುವು ನೀಡಲಾಗಿದೆ. ಡಿ.20ರ ಒಳಗೆ ಮಾಹಿತಿ ಅಪ್ ಡೇಟ್ ಮಾಡದ ಶಾಲೆಗಳು ಮಾಡಬೇಕು. ಒಂದು ವೇಳೆ ಮಾಹಿತಿ ಅಪ್‌ಡೇಟ್ ಮಾಡದೇ ಇದ್ದರೆ ಅಥವಾ ಅಪೂರ್ಣ ಮಾಹಿತಿ ನೀಡಿದಲ್ಲಿ ಅಂತಹ ಶಾಲೆಗಳು ಯೋಜನೆಯಿಂದ ಹೊರಗುಳಿದಲ್ಲಿ ತಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡುವುದಾಗಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ರಾಜ್ಯದ ಎಲ್ಲ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

    ನಿರ್ವಹಣಾ ಅನುದಾನ ಉಳಿತಾಯ…
    ಸರ್ಕಾರ ವಿದ್ಯುತ್ ಹಾಗೂ ನೀರನ್ನು ಉಚಿತವಾಗಿ ಒದಗಿಸುವುದಾಗಿ ಆದೇಶಿಸಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲಾ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಬಹುದಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts