

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ಲಯನ್ಸ್ ಕ್ಲಬ್ ಹಕ್ಲಾಡಿ ಚನ್ನಕೇಶವ, ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೆಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ), ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ, ಗ್ರಾಮ ಪಂಚಾಯಿತಿ ಗುಜ್ಜಾಡಿ ಮತ್ತು ಗುಜ್ಜಾಡಿ ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ನೇತ್ರ ಉಚಿತ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆ ಶಿಬಿರ ಗುಜ್ಜಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆಯಿತು.
ಎಸ್ಡಿಎಂಸಿ ಸದಸ್ಯೆ ಗಾಯತ್ರಿ ಕೊಡಂಚ ಶಿಬಿರ ಉದ್ಘಾಟಿಸಿದರು. ಗುಜ್ಜಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ.ತನ್ವಿ ರೈ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಪ್ರಮುಖರಾದ ರಾಘವೇಂದ್ರ ಡಿ, ಎ.ಆರ್. ವಲಿವುಲ್ಲಾ, ಗಂಗಾಧರ ಬಂಟ, ಹುಲಿಯಪ್ಪ ಗೌಡ, ರಾಜು ಪೂಜಾರಿ, ಶಾಂತಾರಾಮ ಶೆಟ್ಟಿ, ನವೀನ್ ಕುಮಾರ್ ಶೆಟ್ಟಿ, ಎಸ್ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿ ಸಂಘದ ಸದಸ್ಯರು, ಲಯನ್ಸ್ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಹಕ್ಲಾಡಿ ಚನ್ನಕೇಶವ ಅಧ್ಯಕ್ಷ ಡಾ.ಕಿಶೋರ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸಂಜೀವ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.