ಕುಂದಾಪುರ: ದೇವಲ್ಕುಂದದಲ್ಲಿ ಭಾನುವಾರ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಒಕ್ಕೂಟ ಅಧ್ಯಕ್ಷ ಶಶಿಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಟಿ.ಎನ್.ರಘುರಾಮ್ ಶೆಟ್ಟಿ, ಪ್ರಾಂತೀಯ ಅಧ್ಯಕ್ಷ ಜಗದೀಶ ಶೆಟ್ಟಿ, ಸುಧಾಕರ ಶೆಟ್ಟಿ ಬಾಂಡ್ಯ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಯು.ಶಂಕರ ಶೆಟ್ಟಿ, ಡಾ.ಅಭಿನಯ್, ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿ ನಯನಾ, ಜ್ಞಾನವಿಕಾಸ ಕಾರ್ಯಕ್ರಮ ಸಮನ್ವಯಾಧಿಕಾರಿ ರೇಣುಕಾ ಕೊಡಪದವು, ಸೇವಾ ಪ್ರತಿನಿಧಿ ಯಶೋದಾ ಉಪಸ್ಥಿತರಿದ್ದರು.