More

    ಬಡವರ ಆರೋಗ್ಯಕ್ಕೆ ವಿಶೇಷ ಯೋಜನೆ

    ಸೇಡಂ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದಾಗಿನಿAದ ಬಡವರ ಬಗ್ಗೆ ವಿಶೇಷ ಕಾಳಜಿವಹಿಸಿ, ಹಲವು ಯೋಜನೆ ಜಾರಿಗೆ ತರಲಾಗಿದೆ. ಆರೋಗ್ಯದ ದೃಷ್ಟಿಯಿಂದ ಜನಪರ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

    ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ವಿಭಾಗ ಹಾಗೂ ಜನ ಹಿತ ದೃಷ್ಟಿ ಕಾಳಜಿ ಕೇಂದ್ರದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಆಶಾಕಿರಣ ಅಭಿಯಾನದಡಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿದ ಮಾತನಾಡಿದರು.

    ನಮ್ಮ ಸರ್ಕಾರ ಅಧಿಕಾರಕ್ಕೇರಿದ ನಂತರ ಜಿಲ್ಲೆಗೆ ಹಲವು ಆಸ್ಪತ್ರೆ ತರಲು ಪ್ರಯತ್ನಿಸಲಾಗಿದೆ. ಟ್ರಾಮಾ ಸೆಂಟರ್ ಉದ್ಘಾಟನೆಯಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ತಾಯಿ, ಮಗು ಆಸ್ಪತ್ರೆ, ಸುಟ್ಟ ಗಾಯಗಳಿಗೆ ಚಿಕಿತ್ಸೆ ನೀಡುವ ಕೇಂದ್ರ ಸೇರಿ ಹಲವು ಖರ್ಚಿಲ್ಲದೆ ಆರೋಗ್ಯ ರಕ್ಷಿಸಲಾಗಿದೆ ಎಂದರು.

    ಅಂಧತ್ವ ನಿವಾರಣೆಗಾಗಿ ಲಕ್ಷಾಂತರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು ೧೫ ಸಾವಿರ ಜನರಿಗೆ ಉಚಿತ ಕನ್ನಡಕ ವಿತರಿಸಿದ್ದು, ಒಂದೇ ದಿನದಲ್ಲಿ ೪೦೦ ಜನರಿಗೆ ಶಸ್ತಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರತಿಕಾಂತಸ್ವಾಮಿ ಮಾತನಾಡಿದರು. ಜಿಲ್ಲಾ ಅಂಧತ್ವ ನಿವಾರಣಾ ಅಧಿಕಾರಿ ಡಾ.ರಾಜಕುಮಾರ ಕುಲಕರ್ಣಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಸಂಜೀಕುಮಾರ ಪಾಟೀಲ್, ತಹಸೀಲ್ದಾರ್ ಶಿವಾನಂದ ಮೇತ್ರೆ ಇದ್ದರು.

    ಆಶಾ ಕಾರ್ಯಕರ್ತೆ ರೇಖಾ ಮದಕಲ್ ಪ್ರಾರ್ಥಿಸಿದರು. ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ ಮನ್ನೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಜ್ಯೋತಿ ಲಿಂಗಂಪಲ್ಲಿ ನಿರೂಪಣೆ ಮಾಡಿದರು. ಡಾ.ರೋಹಿಣಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts