ಆರೋಗ್ಯ ತಪಾಸಣಾ ಉಚಿತ ಶಿಬಿರ

shibira
ಆರೋಗ್ಯ ತಪಾಸಣಾ ಶಿಬಿರವನ್ನು ಆಯುರ್ವೇದ ವೈದ್ಯೆ ಸರಿತಾ ಉದ್ಘಾಟಿಸಿದರು
Published on

ಕೋಟ: ಲಯನ್ಸ್ ಕ್ಲಬ್ ಕುಂದಾಪುರ ಅಮೃತದಾರ ಪ್ರಯೋಜಕತ್ವದಲ್ಲಿ ಲಯನ್ಸ್ ಕ್ಲಬ್ ಕೋಸ್ಟಲ್ ಹಾಗೂ ಶ್ರೀ ವಿಘ್ನೇಶ್ವರ ಯುವಕ ಮಂಡಲ ಬೆಟ್ಟಿಗಾರ ಸಹಯೋಗದೊಂದಿಗೆ ಭಾನುವಾರ ಬಸ್ರೂರು ಮೂರುಕೈ ಹತ್ತಿರದ ನಿತ್ಯಾದರ ಹಾಲ್‌ನಲ್ಲಿ ಆರೋಗ್ಯ ಉಚಿತ ತಪಾಸಣೆ ಮತ್ತು ಮಂಡಿ ನೋವು ಚಿಕಿತ್ಸಾ ಶಿಬಿರ ನಡೆಯಿತು.

ಆಯುರ್ವೇದ ವೈದ್ಯೆ ಸರಿತಾ ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಅಮೃತಧಾರ ಅಧ್ಯಕ್ಷೆ ಡಾ.ವಾಣಿಶ್ರೀ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ವೈದ್ಯಾಧಿಕಾರಿ ಡಾ.ಧನೇಶ್ವರಿ, ಲಯನ್ಸ್ ವಲಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಶ್ರೀ ವಿಘ್ನೇಶ್ವರ ಯುವಕ ಮಂಡಲ ಅಧ್ಯಕ್ಷ ಮಂಜುನಾಥ ಮೊಗವೀರ, ಲಯನ್ಸ್ ನಿಕಟಪೂರ್ವ ಅಧ್ಯಕ್ಷೆ ಆಶಾ ಶೆಟ್ಟಿ, ಲಯನ್ಸ್ ಕ್ಲಬ್ ಅಮೃತಧಾರ ಸ್ಥಾಪಕಾಧ್ಯಕ್ಷೆ ಸರಸ್ವತಿ ಪುತ್ರನ್, ಸದಸ್ಯೆ ಚಂದ್ರಿಕಾಧನ್ಯಾ ಉಪಸ್ಥಿತರಿದ್ದರು. ಸಂಸ್ಥೆ ಸದಸ್ಯ ವಸಂತರಾಜ್ ಶೆಟ್ಟಿ ನಿರೂಪಿಸಿದರು. ಕುಂದಾಪುರ ಪುರಸಭಾ ಸದಸ್ಯ ಶೇಖರ್ ಪೂಜಾರಿ ಸ್ವಾಗತಿಸಿದರು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮಚ್ಚಟ್ಟು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net