

ಶಿರ್ವ: ಮಟ್ಟಾರು ವಿಶ್ವ ಹಿಂದು ಪರಿಷತ್, ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ನೇತೃತ್ವದಲ್ಲಿ ಡಾ.ವಿ.ಎಸ್.ಆಚಾರ್ಯ ಬಯಲು ರಂಗಮಂದಿರದಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಸೊಸೈಟಿ, ಅಂಧತ್ವ ನಿಯಂತ್ರಣ ವಿಭಾಗ ಉಡುಪಿ, ಸಂಚಾರಿ ನೇತ್ರಘಟಕ ಜಿಲ್ಲಾಸ್ಪತ್ರೆ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಉಪ ಆರೋಗ್ಯ ಕೇಂದ್ರ ಮಟ್ಟಾರು ಸಹಭಾಗಿತ್ವದಲ್ಲಿ ನೇತ್ರ ತಪಾಸಣೆ, ಗ್ಲಾಕೋಮಾ ಕಾಯಿಲೆ ಮಾಹಿತಿ, ದಂತ ಚಿಕಿತ್ಸಾ ಶಿಬಿರ, ಮಧುಮೇಹ, ರಕ್ತದೊತ್ತಡ ಉಚಿತ ತಪಾಸಣೆ ಶಿಬಿರ ನಡೆಯಿತು.
ಉಡುಪಿ ಜಿಲ್ಲಾಸ್ಪತ್ರೆ ಹಿರಿಯ ನೇತ್ರ ತಜ್ಞ ಡಾ.ನಿತ್ಯಾನಂದ ನಾಯಕ್ ಉದ್ಘಾಟಿಸಿದರು. ಮಟ್ಟಾರು ಬಬ್ಬರ್ಯ ದೈವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಕೆ.ಎಂ.ಸಿ ಆಸ್ಪತ್ರೆ ನೇತ್ರತಜ್ಞ ಡಾ.ಫಾಯಲ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರ ದಂತ ಆರೋಗ್ಯಾಧಿಕಾರಿ ಡಾ.ಗಾಯತ್ರಿ ಸಂತೋಷ್, ಸಮುದಾಯ ಆರೋಗ್ಯಾಧಿಕಾರಿ ಮಾನಸಾ ಜೆ., ಆರೋಗ್ಯ ಸುರಕ್ಷಾಧಿಕಾರಿ ಗೀತಾ, ಶಿರ್ವ ಗ್ರಾಪಂ ಸದಸ್ಯ ದೇವದಾಸ್ ನಾಯಕ್, ಮಮತಾ ಶೆಟ್ಟಿ, ಮಟ್ಟಾರು ವಿ.ಹಿಂ.ಪ. ಅಧ್ಯಕ್ಷ ಜಗದೀಶ ಆಚಾರ್ಯ ಉಪಸ್ಥಿತರಿದ್ದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಬಿರಕ್ಕೆ ಭೇಟಿ ನೀಡಿದರು. ಆರೋಗ್ಯ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆ ವೈದ್ಯರು, ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಸಹಕರಿಸಿದರು. 150ಕ್ಕೂ ಅಧಿಕ ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದರು.