

ಮೈಸೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜನ್ಮ ದಿನ ಪ್ರಯುಕ್ತ ಗುರುವಾರ ಚಾಮರಾಜ ವಿಧಾನಸಭಾ ಯುವ ಕಾಂಗ್ರೆಸ್ ವತಿಯಿಂದ ವಿನಾಯಕನಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ಶಿಬಿರ ಉದ್ಘಾಟಿಸಿದ ಶಾಸಕ ಕೆ.ಹರೀಶ್‌ಗೌಡ ಮಾತನಾಡಿ, ಸಾರ್ವಜನಿಕರಿಗೆ ಅನುಕೂಲವಾಗುವ ಇಂತಹ ಸಮಾಜಮುಖಿ ಕೆಲಸಗಳು ಹೆಚ್ಚು ನಡೆಯಬೇಕು ಎಂದು ತಿಳಿಸಿದರು.
ಇದೇ ವೇಳೆ ಶಾಲಾ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು. ಚಾಮರಾಜ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಡಿ.ಎಂ.ನಿಶಾಂತ್ ಪಟೇಲ್, ಯುವ ಕಾಂಗ್ರೆಸ್ ಮೈಸೂರು ಉಸ್ತವಾರಿ ದೀಪಕ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದೀಪಕ್ ಶಿವಣ್ಣ, ಮೈಸೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್, ಮಾಜಿ ಮೇಯರ್ ರಾಜೇಶ್ವರಿ ಪುಟ್ಟಸ್ವಾಮಿ, ಮುಖಂಡರಾದ ನಿತಿನ್ ಪುಟ್ಟಸ್ವಾಮಿ, ಕುಮಾರ್, ಲಕ್ಕನ್, ದಿಲೀಪ್, ಪವನ್, ವಿನಯ್, ಸಂಜಯ್, ಚಂದ್ರು ಇತರರಿದ್ದರು.