ಉಚಿತ ಆರೋಗ್ಯ ತಪಾಸಣೆ ಶಿಬಿರ

Free health checkup camp
Published on

ಮಡಿಕೇರಿ:

ಮಣಿಪಾಲ್ ಆಸ್ಪತ್ರೆ ಮೈಸೂರು ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ಹಿರಿಯ ನಾಗರಿಕರಿಗೆ ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. 

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಡಿಕೇರಿ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಎ.ಯಾಕುಬ್ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಂಗ್ರೆಸ್ ಮಡಿಕೇರಿ ನಗರಾಧ್ಯಕ್ಷ ಬಿ.ವೈ. ರಾಜೇಶ್ ವಹಿಸಿದ್ದರು. ಮಣಿಪಾಲ್ ಆಸ್ಪತ್ರೆಯ ಡಾ.ಪ್ರದೀಪ್ ರಾಜಣ್ಣ ಮತ್ತು ಸಂಗಡಿಗರು ಹಿರಿಯರ ಆರೋಗ್ಯ ತಪಾಸಣೆ ನಡೆಸಿದರು.

ಶಿಬಿರದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ನಗರ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಮೂಡಾ ಮಾಜಿ ಅಧ್ಯಕ್ಷ ಚುಮ್ಮಿದೇವಯ್ಯ, ಅಲ್ಪಸಂಖ್ಯಾತರ ವಿಭಾಗದ ಬ್ಲಾಕ್ ಅಧ್ಯಕ್ಷ ಕಲೀಲ್ ಭಾಷ, ಕಾರ್ಯದರ್ಶಿ ರೌಹುಫ್, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಮಹಿಳಾ ಕಾಂಗ್ರೆಸ್ ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಪ್ರಮುಖರಾದ ಅಂಬೇಕಲ್ ನವೀನ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net