More

    25ರಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

    ನಾಪೋಕ್ಲು: ಇಲ್ಲಿನ ನಂದಿನಿ ಆಸ್ಪತ್ರೆಯ ಬೆಳ್ಳಿಹಬ್ಬದ ಪ್ರಯುಕ್ತ ಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೆಂಗಳೂರು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಎ.ಕೆ ಸುಬ್ಬಯ್ಯ ಎಜುಕೇಶನ್ ಟ್ರಸ್ಟ್, ಕೊಡವ ಸಮಾಜ ಸ್ಪೋರ್ಟ್ಸ್ ಕಲ್ಚರಲ್ ಅಸೋಸಿಯೇಷನ್ ಹಾಗೂ ಶ್ರೀರಾಮ ಟ್ರಸ್ಟ್ ಜಂಟಿಯಾಗಿ ಫೆ.25ರಂದು ಆರೋಗ್ಯ ಉಚಿತ ತಪಾಸಣೆ ಶಿಬಿರವನ್ನು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

    ಶಾಸಕ ಎ.ಎಸ್.ಪೊನ್ನಣ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ಮಂತರ್‌ಗೌಡ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ವಿಧಾನ ಪರಿಷತ್ ಸದಸ್ಯ ಮಾಜಿ ಶಾಂತೆಯಂಡ ವೀಣಾ ಅಚ್ಚಯ್ಯ, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ಕುಮಾರ್ ಇತರರು ಭಾಗವಹಿಸಲಿದ್ದಾರೆ ಎಂದು ನಂದಿನಿ ಆಸ್ಪತ್ರೆಯ ನಿರ್ದೇಶಕ ಹಾಗೂ ಕೊಡವ ಸಮಾಜದ ಸ್ಪೋರ್ಟ್ಸ್ ಆ್ಯಂಡ್ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಬೆಂಗಳೂರಿನ ಸಪ್ತಗಿರಿ ಮೆಡಿಕಲ್ ಕಾಲೇಜಿನ ಪ್ರತಿನಿಧಿ ನಿರಂಜನ್ ಶೆಟ್ಟಿ ಮಾತನಾಡಿ, ಶಿಬಿರದಲ್ಲಿ ಹೃದಯ ರೋಗ, ಮೂತ್ರಪಿಂಡ, ನರರೋಗ ಸಂಬಂಧಿ ತೊಂದರೆ ಉಳ್ಳವರು ಪಾಲ್ಗೊಳ್ಳಬಹುದಾಗಿದೆ. ಪ್ರಾರಂಭಿಕ ಹಂತದಲ್ಲಿರುವ ಗುಣಪಡಿಸಲಾಗುವಂತಹ ಸ್ತನ ಕ್ಯಾನ್ಸರ್ ಪತ್ತೆ ಹಚ್ಚುವ ನಮೋಗ್ರಾಫಿ ಮತ್ತು ಗರ್ಭಕಂಠದ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. ತಜ್ಞ ವೈದ್ಯರ ಸಲಹೆ ಮೇರೆಗೆ ಶಿಬಿರದಲ್ಲಿ ಉಚಿತವಾಗಿ ಬಿಪಿ, ಇಸಿಜಿ ಎಕೋ ಸ್ಕ್ಯಾನಿಂಗ್ ಮಾಡಲಾಗುವುದು. ಆಯುಷ್ಮಾನ್ ಭಾರತ್, ಯಶಸ್ವಿನಿ ಯೋಜನೆ ಹೊಂದಿದವರಿಗೆ ಚಿಕಿತ್ಸೆ ನೀಡಲಾಗುವುದು. ಆಯ್ಕೆಯಾದ ರೋಗಿಗಳಿಗೆ ಸಪ್ತಗಿರಿ ಆಸ್ಪತ್ರೆಗೆ ಹೋಗಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

    ಶ್ರೀ ರಾಮ ಟ್ರಸ್ಟ್ ಕಾರ್ಯದರ್ಶಿ ನಾಯಕಂಡ ದೀಪು ಚಂಗಪ್ಪ, ಕೊಡವ ಸಮಾಜದ ಉಪಾಧ್ಯಕ್ಷ ಕೊಂಡೀರ ನಂದಾ, ಸಹಕಾರ್ಯದರ್ಶಿ ಕರವಂಡ ಸರು ಸೋಮಣ್ಣ, ಕಲಿಯಂಡ ಕೌಶಿಕ್, ಬೊಳ್ಳಚೆಟ್ಟೀರ ಸುರೇಶ್, ಕಲಿಯಂಡ ದೀಪು ಚಂಗಪ್ಪ, ಅರೆಯಡ ಗಣೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts