More

    ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಕೊಡುಗೆ

    ಉಡುಪಿ: ಶಿವಮೊಗ್ಗ ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಒಟ್ಟು 5.60 ಲಕ್ಷ ರೂ. ಮೌಲ್ಯದ 25,500 ಟ್ರಿಪಲ್ ಲೇಯರ್ ಫೇಸ್‌ಮಾಸ್ಕ್, ಶಿಕ್ಷಕರಿಗೆ ಎನ್-95 ಮಾಸ್ಕ್, ಫೇಸ್‌ಶೀಲ್ಡ್‌ಗಳನ್ನು ಹಸ್ತಾಂತರಿಸಲಾಗಿದೆ.

    ಕರೊನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂನ್ 25ರಿಂದ ಜುಲೈ 4ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಫೇಸ್‌ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸುರಕ್ಷತೆ ಸಲಕರಣೆಗಳನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪರವಾಗಿ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಮತ್ತು ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಶಿವರಾಮ್ ಕೆ.ಎಂ ಅವರು ಶಿವಮೊಗ್ಗ ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ. ಅವರಿಗೆ ಹಸ್ತಾಂತರಿಸಿದರು. ಜಿಲ್ಲಾಡಳಿತ ಪರವಾಗಿ ಜಿಲ್ಲಾಧಿಕಾರಿ ಕೃತಜ್ಞತೆ ಸಲ್ಲಿಸಿದರು.

    ಅಪರ ಜಿಲ್ಲಾಧಿಕಾರಿ ಅನುರಾಧಾ ಟಿ. ಪೈ, ಡಿಡಿಪಿಐ ರಮೇಶ್ ಎ.ಎಂ, ಮಹಾನಗರ ಪಾಲಿಕೆ ಸದಸ್ಯೆ ಸುನೀತಾ ಅಣ್ಣಪ್ಪ, ಶಿವಮೊಗ್ಗ ಮೊಗವೀರ ಮಹಾಜನ ಸಂಘದ ಅಪ್ಪು ಕೋಟ್ಯಾನ್, ಕೆ.ವಿ ಅಣ್ಣಪ್ಪ, ಮಹಾಬಲ, ಪಾಂಡುರಂಗ, ಮೊಗವೀರ ಯುವ ಸಂಘಟನೆ ವಿಠಲ ಕರ್ಕೇರ, ರವೀಂದ್ರ ಶ್ರೀಯಾನ್ ಉಪಸ್ಥಿತರಿದ್ದರು.

    ಧೃತಿಗೆಡದೆ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟ. ಕರೊನಾ ಸಂಕಷ್ಟದಿಂದಾಗಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಶಿಕ್ಷಣ ಎರಡಕ್ಕೂ ಸಮಸ್ಯೆಯಾಗಿದೆ. ಧೃತಿಗೆಡದೆ ಪರೀಕ್ಷೆ ಎದುರಿಸಬೇಕಾಗಿರುವುದು ಅನಿವಾರ್ಯ. ವಿದ್ಯಾರ್ಥಿಗಳು ನಿರ್ಭೀತಿಯಿಂದ ಪರೀಕ್ಷೆ ಬರೆಯುವ ಸಲುವಾಗಿ ಉಡುಪಿ ಜಿಲ್ಲೆಯಲ್ಲಿ 16,300 ವಿದ್ಯಾರ್ಥಿಗಳಿಗೆ, ದ.ಕ ಜಿಲ್ಲೆಯ 30000 ವಿದ್ಯಾರ್ಥಿಗಳಿಗೆ ಫೇಸ್‌ಮಾಸ್ಕ್ ವಿತರಿಸಿದ್ದೇವೆ, ಪ್ರಸ್ತುತ ಶಿವಮೊಗ್ಗ ಜಿಲ್ಲೆಯ 25,500 ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಮುಂದಿನ ಹಂತದಲ್ಲಿ ವಿಜಯಪುರ ಜಿಲ್ಲೆಯ 37000 ವಿದ್ಯಾರ್ಥಿಗಳಿಗೆ ಫೇಸ್ ಮಾಸ್ಕ್ ವಿತರಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಕರೊನಾ ಬಗ್ಗೆ ಭಯಪಡದೆ ಉತ್ತಮ ಅಂಕ ಗಳಿಸುವ ಮೂಲಕ ಕೋವಿಡ್ ವಿರುದ್ಧ ಹೋರಾಡಿ ಎಂದು ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ಜಿ. ಶಂಕರ್ ಕರೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts