

ಬೆಳ್ತಂಗಡಿ: ಉಜಿರೆ ಎಸ್ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ನಡೆಯಿತು.
ಸಂಧಿವಾತ ತಜ್ಞೆ ಡಾ.ಅಶ್ವಿನಿ ಕಾಮತ್ ರೋಗಿಗಳ ತಪಾಸಣೆ ನಡೆಸಿದರು. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಶಿಬಿರದ ಸದುಪಯೋಗ ಪಡೆದರು.