More

    ಮಹಾರಾಷ್ಟ್ರ ಸರ್ಕಾರದ್ದು ಅಧಿಕಾರ ದುರ್ಬಳಕೆ; ಪತ್ರಿಕಾ ಸ್ವಾತಂತ್ರ್ಯಹರಣ ಖಂಡನಾರ್ಹ: ಅಮಿತ್ ಷಾ

    ನವದೆಹಲಿ: ಪತ್ರಕರ್ತ ಅರ್ನಾಬ್​ ಗೋಸ್ವಾಮಿ ಅವರನ್ನು ಬಂಧಿಸಿದ್ದಕ್ಕೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮಹಾರಾಷ್ಟ್ರ ಸರ್ಕಾರದಿಂದ ಪತ್ರಿಕಾ ಸ್ವಾತಂತ್ರ್ಯಹರಣ ನಡೆದಿದೆ ಎಂಬ ಆಕ್ರೋಶವೂ ವ್ಯಕ್ತವಾಗಿದೆ. ಇದೀಗ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಂದ್ರ ಗೃಹಸಚಿವ ಅಮಿತ್ ಷಾ ಕೂಡ ಗುಡುಗಿದ್ದಾರೆ.

    ಹಳೇ ಪ್ರಕರಣವೊಂದರ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪೊಲೀಸರು ಪತ್ರಕರ್ತ ಅರ್ನಾಬ್​ ಗೋಸ್ವಾಮಿ ಅವರನ್ನು ಬಂಧಿಸಿದೆ. ಆ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್, ಮಹಾರಾಷ್ಟ್ರದಲ್ಲಿನ ಬೆಳವಣಿಗೆ ತುರ್ತುಪರಿಸ್ಥಿತಿಯ ದಿನಗಳನ್ನು ಮತ್ತೆ ನೆನಪಿಗೆ ಬರುವಂತೆ ಮಾಡಿದೆ. ಇದು ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಈಗಾಗಲೇ ಖಂಡಿಸಿದ್ದಾರೆ.

    ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಅಂಥದ್ದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಹಾಗೂ ಅದರ ಮಿತ್ರಪಕ್ಷಗಳು ಪ್ರಜಾಪ್ರಭುತ್ವವನ್ನು ಮತ್ತೊಮ್ಮೆ ಅಣಕಿಸಿವೆ. ಪತ್ರಕರ್ತ ಅರ್ನಾಬ್ ಗೋಸ್ವಾಮಿ ಅವರ ಮೇಲಿನ ದಾಳಿ ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಹಾಗೂ ವೈಯಕ್ತಿಕ ಸ್ವಾತಂತ್ರ್ಯದ ಹರಣ ಎಂದು ಖಂಡಿಸಿದ್ದಾರೆ. ಮಾತ್ರವಲ್ಲ, ಅಲ್ಲಿನ ಸರ್ಕಾರ ಮಾಧ್ಯಮದ ವಿರುದ್ಧ ಸ್ಪಷ್ಟವಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಖಂಡನಾರ್ಹ ಮತ್ತು ಅದನ್ನು ಖಂಡಿಸುತ್ತೇವೆ ಎಂಬುದಾಗಿ ಷಾ ಗುಡುಗಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts