More

    ಖಾಸಗಿ ಆಸ್ಪತ್ರೆಗಳಲ್ಲಿಯೂ ಆರ್‌ಎಟಿ ಪರೀಕ್ಷೆ ಉಚಿತ

    ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳ ಶೀಘ್ರ ಪತ್ತೆ, ಸೋಂಕು ಮೂಲ ಮತ್ತು ಪರಿಣಾಮಕಾರಿ ನಿಯಂತ್ರಣ ಕ್ರಮ ಅನುಸರಿಸುವ ದೃಷ್ಟಿಯಿಂದ ಕೋವಿಡ್ ಪರೀಕ್ಷಾ ವಿಧಾನವನ್ನು ಚುರುಕುಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
    ಇನ್ನು ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿಯೂ ತ್ವರಿತ ಪ್ರತಿಜನಕ ಪರೀಕ್ಷೆ (ರ‌್ಯಾಪಿಡ್ ಆ್ಯಂಟಿಜೆನ್ ಟೆಸ್ಟ್)ಉಚಿತ. ಜಿಲ್ಲೆಯ ಎಲ್ಲ ವೈದ್ಯಕೀಯ ಕಾಲೇಜು ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಒಟ್ಟು 25,800 ಟೆಸ್ಟ್ ಕಿಟ್ ಪೂರೈಸಲಾಗಿದೆ. ಕೋವಿಡ್ ರೋಗಿಗಳನ್ನು ದಾಖಲಿಸುವ 50ಕ್ಕಿಂತ ಹೆಚ್ಚು ಹಾಸಿಗೆಗಳುಳ್ಳ ಎಲ್ಲ ಖಾಸಗಿ ಆಸ್ಪತ್ರೆಗಳಿಗೂ ಇಲಾಖೆಯಿಂದ ಆರ್‌ಎಟಿ ಟೆಸ್ಟ್ ಕಿಟ್ ನೀಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

    ದ.ಕ.ದಲ್ಲಿ 166 ಮಂದಿಗೆ ಸೋಂಕು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಹೊಸ 166 ಕರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 188 ಮಂದಿ ಗುಣವಾಗಿ ಬಿಡುಗಡೆಯಾಗಿದ್ದಾರೆ. ಹೊಸ ಪಾಸಿಟಿವ್ ಪ್ರಕರಣಗಳಲ್ಲಿ ಐಎಲ್‌ಐ 83, ಸಾರಿ 13, ಪ್ರಾಥಮಿಕ ಸಂಪರ್ಕದಿಂದ 19 ಸೋಂಕು ಪಡೆದವರು. 51 ಮಂದಿಯ ಸೋಂಕು ಮೂಲ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಇಲ್ಲಿವರೆಗಿನ ಒಟ್ಟು ಪಾಸಿಟಿವ್ ಪ್ರಕರಣಗಳು 6,881. ಆಸ್ಪತ್ರೆಯಿಂದ ಬಿಡುಗಡೆಯಾದವರು 3304. ಸಕ್ರಿಯ ಪ್ರಕರಣಗಳು 3369. ಕರೊನಾ ಸೋಂಕಿಗೆ ಒಳಗಾಗಿ ಮೃತಪಟ್ಟವರು ಒಟ್ಟು 208.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts