More

    ಪಡಿತರ ಚೀಟಿಯ ತಲಾ ಸದಸ್ಯನಿಗೆ 5 ಕೆಜಿ ಅಕ್ಕಿ, 170 ರೂ.

    ಧಾರವಾಡ: ಚುನಾವಣೆಗೂ ಮೊದಲು ಕಾಂಗ್ರೆಸ್ ೋಷಿಸಿದ್ದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ 10 ಕೆಜಿ ಅಕ್ಕಿ ಸಿಗುತ್ತಾ? ಅಥವಾ ಪ್ರತಿ ಕೆಜಿಗೆ 34 ರೂ.ಗಳಂತೆ ಹಣ ಸಂದಾಯವಾಗುತ್ತಾ? ಎಂಬ ಜಿಜ್ಞಾಸೆ ಮೂಡಿಸಿತ್ತು. ತಿಂಗಳಿಂದ ಈ ಗೊಂದಲಕ್ಕೆ ಪರಿಹಾರ ಕಂಡುಕೊಂಡಿದ್ದು, ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಬದಲು ತಲಾ 34 ರೂ.ಗಳಂತೆ 170 ರೂ. ಸಂದಾಯ ಮಾಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇದೇ ತಿಂಗಳು ಅನುಷ್ಠಾನಕ್ಕೆ ಮುಂದಾಗಿದೆ.
    ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯನಿಗೆ ತಲಾ 170 ರೂ. ಹಣವನ್ನು ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ಪಾವತಿಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಅದರಂತೆ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನಭಾಗ್ಯ ಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿಯ (ಬಿಪಿಎಲ್) ಪ್ರತಿ ಲಾನುಭವಿಗೆ 5 ಕೆಜಿ ಆಹಾರಧಾನ್ಯದ ಬದಲು ಕೆಜಿಗೆ 34 ರೂ.ಗಳಂತೆ ಪಡಿತರ ಚೀಟಿಯಲ್ಲಿರುವ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಪಾವತಿಸಲು ಜಿಲ್ಲೆಗೆ 20.77 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ಈಗಾಗಲೇ 16.67 ಕೋಟಿ ರೂ.ಗಳನ್ನು ಲಾನುಭವಿಗಳ ಖಾತೆಗೆ ಜಮೆ ಮಾಡಲು ಜಿಲ್ಲಾ ಖಜಾನೆಗೆ ಕಳಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಪಡಿತರ ಚೀಟಿದಾರರ ಮುಖ್ಯಸ್ಥರ ಬ್ಯಾಂಕ್ ಖ್ಯಾತೆಗೆ ಈ ಹಣ ವರ್ಗಾವಣೆಯಾಗಲಿದೆ.
    * 13,45,504 ಮಂದಿ ಲಾನುಭವಿಗಳು: ಜಿಲ್ಲೆಯಲ್ಲಿ 3,57,340 ಆದ್ಯತಾ ಪಡಿತರ ಚೀಟಿಗಳು (ಬಿಪಿಎಲ್), 29,784 ಅಂತ್ಯೋದಯ (ಎಎವೈ) ಪಡಿತರ ಚೀಟಿ ಸೇರಿ 3,87,124 ಲಕ್ಷ ಪಡಿತರ ಚೀಟಿಗಳಿವೆ. 13,45,504 ಮಂದಿ ಲಾನುಭವಿಗಳಿದ್ದಾರೆ. 34,603 ಪಡಿತರ ಚೀಟಿದಾರರಿಗೆ ಬ್ಯಾಂಕ್ ಖಾತೆ ಇಲ್ಲ. ಬ್ಯಾಂಕ್ ಖಾತೆ ಇಲ್ಲದ ಹಾಗೂ ಆಧಾರ್ ಲಿಂಕ್ ಆಗದ ಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಖಾತೆ  ಮಾಡಿಸುವಂತೆ ಆದೇಶಿಸಲಾಗಿದೆ.
    ಬ್ಯಾಂಕ್ ಖಾತೆ ಮಾಡಿಸದ, ಆಧಾರ್ ಲಿಂಕ್ ಮಾಡಿಸದ ಹಾಗೂ ನಿಷ್ಕ್ರಿಯ ಪಡಿತರ ಚೀಟಿದಾರರ ಮಾಹಿತಿಯನ್ನು ಆಯಾ ಪಡಿತರ ಅಂಗಡಿಗಳಿಗೆ ಕಳಿಸಲಾಗಿದೆ. ಬ್ಯಾಂಕ್ ಖಾತೆ ಇದ್ದರೂ ಆಧಾರ್ ಲಿಂಕ್ ಆಗದ ಕಾರಣ ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಸಾಧ್ಯವಿಲ್ಲ ಎಂಬುದು ಆಹಾರ ಇಲಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಕಂಡುಬಂದಿದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದ, ಅಥವಾ ಸಕ್ರಿಯ ಬ್ಯಾಂಕ್ ಖಾತೆ ಇಲ್ಲದ ಪಡಿತರ ಚೀಟಿದಾರರು ಜು. 20ರೊಳಗೆ ಸರಿಪಡಿಸಿಕೊಳ್ಳಬೇಕು ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts