ಬಿಇಎಲ್ ಶಾಲೆ ವಿದ್ಯಾರ್ಥಿಗಳಿಗೆ ಹಳೇ ವಿದ್ಯಾರ್ಥಿಗಳಿಂದ ಉಚಿತ ಪರಿಕರಗಳ ವಿತರಣೆ

BEL
Published on

ಬೆಂಗಳೂರು: ನಗರದ ಅತಿ ಹಳೆಯ ವಿದ್ಯಾಲಯಗಳಲ್ಲಿ ಒಂದಾಗಿರುವ ಬಿಇಎಲ್ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಶೂ, ಸಾಕ್ಸ್, ಊಟದ ಡಬ್ಬಿ ಹಾಗೂ ಇನ್ನಿತರ ಪರಿಕರಗಳನ್ನು ವಿತರಿಸಲಾಯಿತು.

1998ರಲ್ಲಿ ಇದೇ ಶಾಲೆಯಲ್ಲಿ ಅಭ್ಯಾಸ ಮಾಡಿ ವಿವಿಧ ಉದ್ಯೋಗಗಳಲ್ಲಿರುವ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲೆಯ ಬಡ ವಿದ್ಯಾರ್ಥಿಗಳಿಗೆ ವಿವಿಧ ಪರಿಕರಗಳನ್ನು ನೀಡಿದರು. ಈ ವೇಳೆ ಮಾತನಾಡಿದ ಶಾಲೆಯ ಪ್ರಾಂಶುಪಾಲರು, ಶಾಲೆಯ ಹಳೆಯ ವಿದ್ಯಾರ್ಥಿಗಳು ನೀಡಿರುವ ಪರಿಕರಗಳನ್ನು ಪಡೆದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ಶಾಲೆಗೆ, ಪೋಷಕರಿಗೆ ಕೀರ್ತಿ ತರಬೇಕು ಎಂದು ಹೇಳಿದರು.

ಶಾಲಾ ಆವರಣದಲ್ಲಿ ನಡೆದ ಪರಿಕರಗಳ ವಿತರಣೆ ಸಮಾರಂಭದಲ್ಲಿ ಸಿಬ್ಬಂಧಿಗಳು, ಹಳೇ ವಿದ್ಯಾರ್ಥಿಗಳ ಸಂಘದ ಸದಸ್ಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net